Latest

ದೆಹಲಿಯಲ್ಲಿ ಯಡಿಯೂರಪ್ಪ, ಶುಕ್ರವಾರ ಮೋದಿ ಭೇಟಿ; ಏನಿದು ರಾಜಕೀಯ ರಹಸ್ಯ?

ಪ್ರಗತಿವಾಹಿನಿ ಸುದ್ದಿ, ನವದೆಹಲಿ –  ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಗುರುವಾರ ಮಧ್ಯಾಹ್ನ ದೆಹಲಿ ತಲುಪಿದ್ದು, ಕೇಂದ್ರ ಸಚಿವರಾದ ರಾಜನಾಥ ಸಿಂಗ್ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ್ದಾರೆ.

ದೆಹಲಿಯ ವಿಮಾನ ನಿಲ್ದಾಣದಲ್ಲಿ ಅವರನ್ನು ಕರ್ನಾಟಕ ಸರ್ಕಾರದ ವಿಶೇಷ ದೆಹಲಿ ಪ್ರತಿನಿಧಿ ಶಂಕರಗೌಡ ಪಾಟೀಲ್ ಹೂಗುಚ್ಛ ನೀಡಿ ಸ್ವಾಗತಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ  ಗೋವಿಂದ ಕಾರಜೋಳ,  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಸಂಸದರಾದ ಅಣ್ಣಾ ಸಾಹೇಬ್ ಜೊಲ್ಲೆ,  ಉಮೇಶ ಜಾಧವ್ ಮೊದಲಾದವರು ಇದ್ದರು.

ಶುಕ್ರವಾರ ಬೆಳಗ್ಗೆ 9 ಗಂಟೆಗೆ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಕಾರ್ಯಕ್ರಮವಿದೆ. ನಂತರ ಕರ್ನಾಟಕದ ಭವನದ ನವೀಕೃತ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸುವರು.

ಇದಾದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನೂ ಯಡಿಯೂರಪ್ಪ ಭೇಟಿಯಾಗಲಿದ್ದಾರೆ.

Home add -Advt

ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಹಾಗೂ ನಡ್ಡಾ ಅವರೊಂದಿಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅನುಮತಿ ಪಡೆಯುವುದು ಸಿಎಂ ಭೇಟಿಯ ಪ್ರಮುಖ ಉದ್ದೇಶ ಎನ್ನಲಾಗಿದೆ.

ಆದರೆ ಇದೇ ವೇಳೆ, ಮುಖ್ಯಮಂತ್ರಿ ಬದಲಾವಣೆಗೆ ಹೈಕಮಾಂಡ್ ಒಲವು ತೋರಿಸಿದ್ದು, ಈ ಕುರಿತು ಚರ್ಚೆ ನಡೆಯಲಿದೆ ಎಂದೂ ಹೇಳಲಾಗುತ್ತಿದೆ. ಯಡಿಯೂರಪ್ಪ ಅವರಿಗೆ 75 ವರ್ಷ ವಯಸ್ಸಾಗಿರುವುದರಿಂದ ಅವರನ್ನು ಕೆಳಗಿಳಿಸಿ ಬೇರೆಯವರನ್ನು ಕೂಡ್ರಿಸಲು ಬಿಜೆಪಿ ವರುಷ್ಠರು ಯೋಚಿಸಿದ್ದು, ಈಗಾಗಲೆ ಕೆಲವರ ಹೆಸರು ಪ್ರಸ್ತಾಪವಾಗಿದೆ ಎಂದು ವದಂತಿ ಹರಡಿದೆ.

 

Related Articles

Back to top button