Latest

ಡಿಸಿ, ಸಿಇಒಗಳಿಗೆ ಯಡಿಯೂರಪ್ಪ ಇಡೀ ದಿನ ಕ್ಲಾಸ್

ಡಿಸಿ, ಸಿಇಒಗಳಿಗೆ ಯಡಿಯೂರಪ್ಪ ಇಡೀ ದಿನ ಕ್ಲಾಸ್

 ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಬೆಂಗಳೂರಿನಲ್ಲಿ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು.

ಸಭೆಯಲ್ಲಿ ಹಲವಾರು ಸೂಚನೆಗಳನ್ನು ನೀಡಲಾಗಿದ್ದು, ಪ್ರಮುಖವಾದ ಸೂಚನೆಗಳು ಹೀಗಿವೆ –

1. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನವೇ ಮುಖ್ಯ ಕಾರ್ಯದರ್ಶಿಗಳು ಹಾಗೂ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳ ಸಭೆ ನಡೆಸಿ ಸರ್ಕಾರದ ಆಶಯ, ಆದ್ಯತೆಗಳ ಕುರಿತು ಸಂಕ್ಷಿಪ್ತವಾಗಿ ತಿಳಿಸಲಾಗಿದೆ.
2.  ಎಲ್ಲ ಹಂತಗಳಲ್ಲಿಯೂ ಆಡಳಿತ ಯಂತ್ರ ಚುರುಕುಗೊಳಿಸಲು ಹಿರಿಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಯಿತು.
3. ಮುಖ್ಯವಾಗಿ ಬರ ಪರಿಸ್ಥಿತಿ ಅತ್ಯಂತ ಗಂಭೀರವಾಗಿರುವುದರಿಂದ ಕುಡಿಯುವ ನೀರು, ಮೇವು ಪೂರೈಕೆ, ಉದ್ಯೋಗ ಒದಗಿಸಲು ಆದ್ಯತೆ ನೀಡುವಂತೆ ಸೂಚಿಸಲಾಯಿತು.
4. ಹೊರ ರಾಜ್ಯಗಳಿಂದ ಮೇವು ತರಿಸುವ ಬದಲಿಗೆ ಸ್ವಂತ ಜಮೀನು, ಕೊಳವೆಬಾವಿ  ಹೊಂದಿರುವ ರೈತರೇ ಮೇವು ಬೆಳೆಯಲು ಆದ್ಯತೆ ನೀಡುವಂತೆ ಹಾಗೂ ಇದಕ್ಕೆ ಪ್ರತಿ ಟನ್‍ಗೆ 4 ಸಾವಿರ ರೂಪಾಯಿ ದರ ನಿಗದಿ ಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ. ಈ ಮೊದಲು ಟನ್‍ಗೆ 3 ಸಾವಿರ ರೂಪಾಯಿ ನಿಗದಿ ಮಾಡಲಾಗಿತ್ತು.
5. ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ದುರ್ಬಳಕೆ ಮಾಡಿಕೊಂಡಲ್ಲಿ, ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚನೆ.
6. ನರೇಗಾ ಯೋಜನೆಗೆ ಕೇಂದ್ರ ಸರ್ಕಾರದಿಂದ ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಗುವುದು.
7.  ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ರಾಜ್ಯ ಸರ್ಕಾರದ ಎಲ್ಲ ಬಾಕಿ ಇರುವ ಪ್ರಸ್ತಾವನೆಗಳನ್ನು ಸಲ್ಲಿಸಲು ಅಗತ್ಯ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ. ಮುಂದಿನ ವಾರ ದೆಹಲಿಗೆ ಭೇಟಿ ನೀಡಿದಾಗ ಕೇಂದ್ರ ಸಚಿವರುಗಳನ್ನು ಭೇಟಿಯಾಗಿ ಈ ಅನುದಾನಗಳ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದರು.
8. ಅನ್ನಭಾಗ್ಯ ಯೋಜನೆಯಡಿ ಸುಮಾರು 1.12 ಕೋಟಿ ಕುಟುಂಬಗಳಿವೆ. ನಿಜವಾದ ಅರ್ಹರಿಗೆ ಯೋಜನೆಯ ಫಲ ದೊರಕಬೇಕು. ಶ್ರೀಮಂತರು, ಸರ್ಕಾರಿ ನೌಕರರು, ಕಾರು ಟ್ರಾಕ್ಟರ್ ಉಳ್ಳವರು ಬಿಪಿಎಲ್ ಕುಟುಂಬಗಳ ಪಟ್ಟಿಗೆ ಸೇರಿದ್ದರೆ ಅವರನ್ನು ಪಟ್ಟಿಯಿಂದ ಕೈಬಿಡುವಂತೆ ಸೂಚನೆ.     ಇದರಿಂದ ಸುಮಾರು 2500 ಕೋಟಿ ರೂ.ಗಳ ಹೊರೆ ರಾಜ್ಯ ಸರ್ಕಾರದ ಮೇಲಿಂದ ತಪ್ಪಿದಂತಾಗುತ್ತದೆ. ಅಗತ್ಯಬಿದ್ದರೆ ಅಕ್ರಮ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ.
9. ಅನ್ನಭಾಗ್ಯ ಯೋಜನೆಯಡಿ  ರಾಜ್ಯದಲ್ಲಿ ಅಕ್ಕಿ  ಎಷ್ಟು ಸಂಗ್ರಹವಿದೆ  ಎಂಬ ಬಗ್ಗೆ ಪರಿಶೀಲಿಸಿ ಮಾಹಿತಿ ನೀಡುವಂತೆ ಸೂಚನೆ. ಸಾಕಷ್ಟು ಅಕ್ಕಿ ಗೋದಾಮುಗಳಲ್ಲಿ ಕೊಳೆಯುತ್ತಿರುವ ಬಗ್ಗೆ ಮಾಹಿತಿ ಬಂದಿರುವ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಯಿತು.
10.  ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ತೊಗರಿ ಬಿತ್ತನೆಯಾಗಿದ್ದು, ಈಗ ಆಗಿರುವ ಮಳೆಯಿಂದ ತೊಗರಿಯ ಉತ್ತಮ ಇಳುವರಿಯ ನಿರೀಕ್ಷೆಯಿದೆ.
11. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಭೆಗಳನ್ನು ಕಾಲಕಾಲಕ್ಕೆ ನಡೆಸಲು ಸೂಚನೆ. ಅಧಿಕಾರಿಗಳು ಶನಿವಾರ, ಭಾನುವಾರಗಳಂದು ಕೇಂದ್ರಸ್ಥಾನದಲ್ಲಿರಬೇಕು ಹಾಗೂ ಅನಗತ್ಯವಾಗಿ ಜಿಲ್ಲಾಧಿಕಾರಿಗಳು ರಜೆ ಹಾಕಬಾರದು.
12. ಕೆರೆಗಳಿಗೆ ನೀರು ತುಂಬಿಸುವ ಮಾದರಿಯಲ್ಲಿಯೇ  ಆಲಮಟ್ಟಿ, ನಾರಾಯಣಪುರ ಅಣೆಕಟ್ಟಿನಿಂದ ಸುಮಾರು 10 ಬ್ಯಾರೇಜ್‍ಗಳಿಗೆ  ನೀರು ತುಂಬಿಸಲು ಸಾಧ್ಯವಿದೆಯೇ ಎಂದು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚನೆ.
13. ರೈತರು ಆತ್ಮಹತ್ಯೆ ಮಾಡಿಕೊಳ್ಳದಿರುವಂತೆ ಧೈರ್ಯ ತುಂಬಬೇಕು.   ರೈತರ ಆತ್ಮಹತ್ಯೆ ಪ್ರಕರಣ ಸಂಭವಿಸಿದಾಗ 2 ದಿನಗಳೊಳಗಾಗಿ ಅಧಿಕಾರಿಗಳು ಭೇಟಿ ನೀಡಿ, ಸಾಂತ್ವನ ಹೇಳಬೇಕು, ಜೊತೆಗೆ 5 ಲಕ್ಷ ರೂ.ಗಳ ಪರಿಹಾರದ ಮೊತ್ತವನ್ನು ತಲುಪಿಸುವಂತೆ ಅಧಿಕಾರಿಗಳಿಗೆ ಸೂಚನೆ. ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರಧನ ಬಿಡುಗಡೆಗೆ ತೊಂದರೆಯಾಗದಂತೆ ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಿಂದಲೇ ಭರಿಸುವಂತೆ ಸೂಚನೆ.
14. ಚೆನ್ನಾಗಿ ಮಳೆ ಆಗಿರುವ ಜಿಲ್ಲೆಗಳಲ್ಲಿ ಹಸಿ ಮೇವು ಬೆಳೆಯಲು ರೈತರಿಗೆ ಉತ್ತೇಜನ ನೀಡುವ ಮೂಲಕ ಕೊರತೆ ಇರುವ ಜಿಲ್ಲೆಗಳಿಗೆ ಪೂರೈಸಲು ನೆರವಾಗುವಂತೆ ಸೂಚನೆ.
15. ಮುಖ್ಯ ಕಾರ್ಯದರ್ಶಿಗಳೂ ಸೇರಿದಂತೆ ಎಲ್ಲ ಹಿರಿಯ ಅಧಿಕಾರಿಗಳೂ ಜಿಲ್ಲೆಗಳಿಗೆ ಭೇಟಿ ನೀಡುವಂತೆ ನಿರ್ದೇಶನ.
16. ಮುಖ್ಯ ಕಾರ್ಯದರ್ಶಿಗಳು ತಿಂಗಳಿಗೊಮ್ಮೆ ಜಿಲ್ಲೆಗಳಿಗೆ ಭೇಟಿ ನೀಡಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಿಗೆ ಎರಡು ಬಾರಿ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಸ್ಥಳ ಪರಿಶೀಲನೆ ನಡೆಸಲು ಸೂಚನೆ.
17. ಜಿಲ್ಲಾಧಿಕಾರಿಗಳು ಹದಿನೈದು ದಿನಕ್ಕೊಮ್ಮೆ ತಾಲ್ಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕ ಕುಂದುಕೊರತೆಗಳಿಗೆ ಸ್ಪಂದಿಸುವಂತೆ ಸೂಚನೆ.
18. ಕೇಂದ್ರ ಸರ್ಕಾರದ ವತಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರಕ್ಕೆ 43.75 ಲಕ್ಷ ಅರ್ಹ ಫಲಾನುಭವಿಗಳ ಘೋಷಣೆಗಳನ್ನು ಕಳುಹಿಸಲಾಗಿದೆ.
19. ಈ ಪೈಕಿ 31.72 ಲಕ್ಷ ಫಲಾನುಭವಿಗಳಿಗೆ ಪ್ರತಿ ರೈತನಿಗೆ 6000/- ರೂ. ಗಳಂತೆ 634.50 ಕೋಟಿ ರೂ. ಗಳನ್ನು ನೇರವಾಗಿ ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ.
20. ಈ ಫಲಾನುಭವಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಮೊದಲನೇ ಕಂತಾಗಿ 2000/- ರೂ. ಅವರ ಖಾತೆಗೆ ಜಮಾ ಮಾಡಲಾಗುವುದು.
21. ಬೆಳೆ ಸಮೀಕ್ಷೆ ಕಾರ್ಯವನ್ನು ಆದ್ಯತೆಯ ಮೇರೆಗೆ ಅತ್ಯಂತ ಎಚ್ಚರಿಕೆಯಿಂದ ಮಾಡಿ, 10 ದಿನಗಳೊಳಗೆ ಪೂರ್ಣಗೊಳಿಸಬೇಕು.
22. ಕಾಯಿಲೆ ಪತ್ತೆ ಆದ ಮೇಲೆ ರೋಗಿಯು ನೋಂದಾಯಿತ ಆಸ್ಪತ್ರೆಗಳಲ್ಲಿ ತನ್ನ ಆಯ್ಕೆಯ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಬೇಕು. ಇದಕ್ಕೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡುವಂತೆ ಸೂಚನೆ.
23. ವಸತಿ ಯೋಜನೆಗಳನ್ನು ಮುತುವರ್ಜಿ ವಹಿಸಿ ಜಾರಿಗೊಳಿಸುವಂತೆ ಸೂಚಿಸಲಾಯಿತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button