Kannada NewsKarnataka NewsLatest

ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯಡಿಯೂರಪ್ಪ

ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಬೆಂಗಳೂರಿನಿಂದ ವಿಮಾನದಲ್ಲಿ ಆಗಮಿಸಿದ ಅವರನ್ನು ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ ಸ್ವಾಗತಿಸಿದರು. ಕೇಂದ್ರ ಗೃಹ ಸಚಿವ ಅಮಿತ ಶಾ ಇಂದು ಮಧ್ಯಾಹ್ನ 2.30ಕ್ಕೆ ಆಗಮಿಸಲಿದ್ದು, ಆ ಹಿನ್ನೆಲೆಯಲ್ಲಿ ಯಡಿಯೂರಪ್ಪ ಆಗಮಿಸಿದ್ದಾರೆ.

Home add -Advt

ಮಾಜಿ ಸಚಿವ ಉಮೇಶ ಕತ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ವಿಶ್ವನಾಥ ಪಾಟೀಲ, ಶಾಸಕ ಅನಿಲ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ ಮೊದಲಾದವರಿದ್ದಾರೆ.

ಪ್ರವಾಹಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಸಿಎಂ ವೀಕ್ಷಿಸುತ್ತಿದ್ದಾರೆ.

ಅಮಿತ ಶಾ ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಂತರ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರವಾಹ ಪರಿಸ್ಥಿತಿ ಕುರಿತು ಸಮಾಲೋಚನೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಪ್ರವಾಹದಿಂದಾಗಿ 6 ಸಾವಿರ ಕೋಟಿ ರೂ. ನಷ್ಟವಾಗಿದ್ದು, ತುರ್ತಾಗಿ 3 ಸಾವಿರ ಕೋಟಿ ರೂ. ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಿನ್ನೆಯಷ್ಟೆ ಆಗಮಿಸಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದ್ದಾರೆ.

ಇದನ್ನೂ ಓದಿ – ನಾಳೆ ಬೆಳಗಾವಿಗೆ ಅಮಿತ್ ಶಾ, ಯಡಿಯೂರಪ್ಪ

Related Articles

Back to top button