Latest

ಯಡಿಯೂರಪ್ಪ ಪ್ರೆಸ್ ಮೀಟ್ ಸಸ್ಪೆನ್ಸ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ   ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಸಚಿವಸಂಪುಟ ಸಭೆ ಬಳಿಕ ಬೆಳಗ್ಗೆ 11 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡುತ್ತೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರಂತೆ. ಆದರೆ ಏನು ಘೋಷಣೆ ಎನ್ನುವ ಕುರಿತು ಯಾರಿಗೂ ಗುಟ್ಟು ಬಿಟ್ಟುಕೊಟ್ಟಿಲ್ಲ.

Home add -Advt

ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಪತ್ರಿಕಾಗೋಷ್ಠಿ ಕುತೂಹಲ ಮೂಡಿಸಿದೆ. ಹಲವಾರು ಸಚಿವರು ಬೇರೆ ಬೇರೆ ನೆಪ ಮಾಡಿಕೊಂಡು ನವದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ಸಚಿವಸಂಪುಟ ವಿಸ್ತರಣೆಗೆ ಇನ್ನೂ ಹಸಿರು ನಿಶಾನೆ ತೋರಿಲ್ಲ.

ಹಾಗಾಗಿ ಯಡಿಯೂರಪ್ಪ ಘೋಷಣೆ ರಾಜಕೀಯದ್ದೋ, ಅಭಿವೃದ್ಧಿಗೆ ಸಂಬಂಧಿಸಿದ್ದೋ ಎನ್ನುವ ಪ್ರಶ್ನೆ ಮೂಡಿದೆ.

Related Articles

Back to top button