Latest

ಬೊಮ್ಮಾಯಿ ಆಫರ್ ತಿರಸ್ಕರಿಸಿದ ಯಡಿಯೂರಪ್ಪ; ಸ್ವಾಗತಿಸಿದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ತಮಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಸ್ತಾಪವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರಾಕರಿಸಿದ್ದಾರೆ.

ನನಗೆ ಸಂಪುಟ ದರ್ಜೆ ಸ್ಥಾನಮಾನ ಬೇಡ. ಮಾಜಿ ಮುಖ್ಯಮಂತ್ರಿಗಳಿಗೆ ನೀಡುವ ಸೌಲಭ್ಯಗಳನ್ನಷ್ಟೆ ನನಗೆ ಕೊಟ್ಟರೆ ಸಾಕು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ತಮ್ಮ ಸರಕಾರ ಇರುವವರೆಗೆ ಯಡಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಬೊಮ್ಮಾಯಿ ಶನಿವಾರವಷ್ಟೆ ಆದೇಶ ಹೊರಡಿಸಿದ್ದರು. ಆದರೆ ಭಾನುವಾರ ಯಡಿಯೂರಪ್ಪ ಆ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದ್ದಾರೆ.

ಯಡಿಯೂರಪ್ಪ ಅವರ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

Home add -Advt

ಬೊಮ್ಮಾಯಿ ಪ್ರಸ್ತಾಪವನ್ನು ತಿರಸ್ಕರಿಸುವ ಯಡಿಯೂರಪ್ಪ ನಿರ್ಧಾರ ಒಳ್ಳೆಯದು. ನಾನೇ ಅವರಿಗೆ ಹೇಳಬೇಕೆಂದಿದ್ದೆ. ಸಂಪುಟ ದರ್ಜೆ ಸ್ಥಾನಮಾನ ನೀಡುವ ಪ್ರಸ್ತಾಪವನ್ನು ಒಪ್ಪಿಕೊಳ್ಳಬೇಡಿ ಎಂದು ಹೇಳುವವನಿದ್ದೆ. ಈಗ ಅವರೇ ನಿರ್ಧಾರ ತೆಗೆದುಕೊಂಡಿದ್ದನ್ನು ನಾನು ಸ್ವಾಗತಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಯಡಿಯೂರಪ್ಪಗೆ ಸಂಪುಟ ದರ್ಜೆಯ ಸ್ಥಾನ

Related Articles

Back to top button