Kannada NewsKarnataka NewsLatest

ಅತ್ತ ಎಚ್ಡಿಕೆ ಬಾಂಬ್; ಇತ್ತ ಯಡಿಯೂರಪ್ಪ, ಸಿದ್ದರಾಮಯ್ಯ, ಡಿಕೆಶಿ ಭೇಟಿ: ಏನಿದು ಅಚ್ಛರಿ?

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಅತ್ತ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜಕೀಯ ಬಾಂಬ್ ಸ್ಫೋಟಿಸುತ್ತಿದ್ದರೆ ಇತ್ತ ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿಯಾದರು.

ಅಚ್ಛರಿಯಾದರೂ ನಿಜ. ಕುಮಾರಸ್ವಾಮಿ ಮೈಸೂರಿನಲ್ಲಿ ಹಲವಾರ ಅಚ್ಛರಿಯ ಹೇಳಿಕೆಗಳನ್ನು ನೀಡುವ ಮೂಲಕ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಕೆಲವೇ ಹೊತ್ತಿನಲ್ಲಿ ಬೆಳಗಾವಿಯಲ್ಲಿ ಈ ದಿಗ್ಗಜರು ಪರಸ್ಪರ ಭೇಟಿಯಾಗಿ ಕುತೂಹಲ ಮೂಡಿಸಿದರು.

ಇವರೆಲ್ಲ ಭೇಟಿಯಾಗಿದ್ದ ಬೆಳಗಾವಿ ವಿಮಾನ ನಿಲ್ದಾಣದಲ್ಲಿ. ಒಂದೇ ವಿಮಾನದಲ್ಲಿ ಬೆಂಗಳೂರಿಗೆ ತೆರಳುವುದಕ್ಕಾಗಿ ಈ ಎಲ್ಲರೂ, ಜೊತೆಗೆ ಇನ್ನೂ ಅನೇಕ ಬಿಜೆಪಿ ನಾಯಕರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಅಚ್ಛರಿಯ ಭೇಟಿಯಾಯಿತು.

ಬಿ.ಎಸ್.ಯಡಿಯೂರಪ್ಪ ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಿ ಹೊರಟಿದ್ದರೆ, ಸಿದ್ದರಾಮಯ್ಯ ಮತ್ತು ಶಿವಕುಮಾರ ತೇರದಾಳದಲ್ಲಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹೊರಟಿದ್ದರು.

Home add -Advt

ಕಾಂಗ್ರೆಸ್ ಸಹವಾಸ ಮಾಡಿ, ದೇವೇಗೌಡರ ಮಾತು ಕೇಳಿ ಕೆಟ್ಟೆ – ಎಚ್ ಡಿಕೆ

Related Articles

Back to top button