
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅ.16 ಮಹಾರಾಷ್ಟ್ರ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.
ಯಡಿಯೂರಪ್ಪ ಮಂಗಳವಾರ ಸಂಜೆ 4.45ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಸಂಜೆ 6 ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯಲ್ಲಿ ವಾಸ್ತವ್ಯ ಮಾಡಲಿರುವ ಅವರು 16 ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ಗೆ ತೆರಳುವರು. ಜತ್, ಸೊಲ್ಲಾಪುರ, ಅಕ್ಕಲಕೋಟೆ, ಚಕ್ಕೂರ್, ಲಾತೂರ್ ಗಳಲ್ಲಿ ಬಹಿರಂಗ ಚುನಾವಣೆ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳುವ ಯಡಿಯೂರಪ್ಪ ಲಾತೂರ್ ನಲ್ಲಿ ವಾಸ್ತವ್ಯ ಮಾಡುವರು.
17ರಂದು ಲಾತೂರ್ ನಿಂದ ದೇವರ ಗಾಣಾಗಾಪುರ, ಗಾಣಗಾಪುರಗಳಿಗೆ ಹೋಗಿ ಕಲಬುರ್ಗಿಗೆ ಆಗಮಿಸುವರು. ನಂತರ ಕಲಬುರ್ಗಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು.
ಲಕ್ಷ್ಮಣ ಸವದಿ ಪ್ರಚಾರ
ಕರ್ನಾಟಕದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಹಾರಾಷ್ಟ್ರದ ವಿವಿಧೆಡೆ ನಿರಂತರ ಪ್ರಚಾರದಲ್ಲಿ ತೊಡಗಿದ್ದಾರೆ. ಸೋಮವಾರ ಮೀರಜ್, ಸಾಂಗ್ಲಿ, ಜತ್ ಗಳಲ್ಲಿ ಬೃಹತ್ ಚುನಾವಣೆ ರ್ಯಾಲಿ ನಡೆಸಿದ್ದಾರೆ. ವಿವಿಧ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ನಡೆಸಿದರು.
ಮಹಾರಾಷ್ಟ್ರ ಆಖಾಡದಲ್ಲಿ ಟೀಮ್ ಕರ್ನಾಟಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ