
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಮಂಗಳವಾರ ಬೆಳಗಾವಿಗೆ ಆಗಮಿಸಲಿದ್ದು, ಬುಧವಾರ ವಿವಿಧೆಡೆ ಲೋಕಸಭಾ ಉಪಚುನಾವಣೆ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಂಗಳವಾರ ಸಂಜೆ 5.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಯಡಿಯೂರಪ್ಪ ಅಲ್ಲಿಂದ ರಸ್ತೆ ಮಾರ್ಗದಲ್ಲಿ ಬೆಳಗಾವಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.
ಬುಧವಾರ ಬೆಳಗ್ಗೆ 11 ಗಂಟೆಗ ರಾಮದುರ್ಗ ತಾಲೂಕು ಸಾಲಹಳ್ಳಿ ಹಾಗೂ 1 ಗಂಟೆಗೆ ಯರಗಟ್ಟಿ, 4.30ಕ್ಕೆ ಇಂಚಲದಲ್ಲಿ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸುವರು.
ನಂತರ ಸಾಂಬ್ರಾ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ತೆರಳುವರು.
ಸಚಿವ ಜಗದೀಶ್ ಶೆಟ್ಟರ್ ಗೆ ಬಹಿರಂಗ ಸವಾಲು ಹಾಕಿದ ಎಂ.ಬಿ.ಪಾಟೀಲ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ