Kannada NewsKarnataka NewsLatest

ಬೆಳಗಾವಿ ಸೇರಿ 3 ಸ್ಥಳಗಳಿಗೆ ಯಡಿಯೂರಪ್ಪ ಪ್ರವಾಸ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೇ 9ರಿಂದ 3 ದಿನಗಳ ಕಾಲ ಉತ್ತರ ಕರ್ನಾಟಕದ 3 ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.

ಬೆಳಗಾವಿ, ಬೀದರ್ ಹಾಗೂ ರಾಯಚೂರು ಜಿಲ್ಲೆಗಳಿಗೆ ಯಡಿಯೂರಪ್ಪ ಪ್ರವಾಸ ಮಾಡಲಿದ್ದಾರೆ. ರಾಜ್ಯದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದರಿಂದ ಯಡಿಯೂರಪ್ಪ ಪ್ರವಾಸ ಹಮ್ಮಿಕೊಂಡಿದ್ದಾರೆ.

Home add -Advt

ಇದೇ ವೇಳೆ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಯಾವುದೇ ಸಂದರ್ಭದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಬಹುದೆಂಬ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಭಾಗದಲ್ಲಿ ಪ್ರವಾಸ ಹಮ್ಮಿಕೊಳ್ಳುತ್ತಿದ್ದು, ಪಕ್ಷ ಸಂಘಟನೆ ಜೊತೆಗೆ ಅಭಿವದ್ಧಿ ಕಾಮಗಾರಿ ಮೂಲಕ ಮತದಾರರನ್ನು ಸೆಳೆಯುವ ಯೋಚನೆಯನ್ನೂ ಹೊಂದಿದ್ದಾರೆ.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ್ ನಿಧನ

Related Articles

Back to top button