
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ವಿಶೇಷ ವಿಮಾನದಲ್ಲಿ ಬೆಳಗ್ಗೆ 9.45 ಗಂಟೆಗೆ ಅವರು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ಇತ್ತೀಚೆಗೆ ನಿಧನರಾಗಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ವಿಶ್ವೇಶ್ವರ ನಗರದ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಅವರು 11 ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಅದೇ ವಿಮಾನದಲ್ಲಿ ನಿರ್ಗಮಿಸುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ