ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬಿ.ಎಸ್.ಯಡಿಯೂರಪ್ಪ ಜುಲೈ 26ಕ್ಕೆ ತಮ್ಮ ಮುಖ್ಯಮಂತ್ರಿಯ ಈ ಅವಧಿಯ 2 ವರ್ಷವನ್ನು ಪೂರೈಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 11 ಗಂಟೆಗೆ 2 ವರ್ಷದ ಸಾಧನಾ ಸಮಾವೇಶದ ರೀತಿಯ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಸಾಧನೆಯ ಕೈಪಿಡಿ ಬಿಡುಗಡೆ ಮಾಡಲಿದ್ದಾರೆ.
ಅಂದೇ ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲರ ಭೇಟಿಗೆ ಅವಕಾಶ ಕೇಳಲಾಗಿದೆ.
ಮುಖ್ಯಮಂತ್ರಿ ಬದಲಾವಣೆ ವಿಷಯ ತೀವ್ರವಾಗಿ ಚರ್ಚೆಗೆ ಒಳಗಾಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅಂದೇ ರಾಜಿನಾಮೆ ನೀಡಲಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ. 2 ವರ್ಷ ಪೂರೈಸಿದ ದಿನವೇ ಅವರು ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ರಾಜಿನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
75 ವರ್ಷ ಮುಗಿಸಿದ ಯಾರಿಗೂ ಪಕ್ಷದಲ್ಲಿ ಅವಕಾಶ ನೀಡಲಾಗಿಲ್ಲ. ನನಗೆ 79 ವರ್ಷ ಆದರೂ ಅವಕಾಶ ಮಾಡಿಕೊಟ್ಟಿದ್ದಾರೆ. ಜುಲೈ 25ರಂದು ರಾಷ್ಟ್ರೀಯ ಅಧ್ಯಕ್ಷರು ಏನು ಸೂಚನೆ ಕೊಡುತ್ತಾರೋ ಅದಕ್ಕೆ ಕಾಯುತ್ತಿದ್ದೇನೆ, ಅದೇ ರೀತಿಯಲ್ಲಿ ನಡೆದುಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಇಂದು ಬೆಳಗ್ಗೆ ತಿಳಿಸಿದ್ದರು.
ಈ ಎಲ್ಲ ಬೆಳವಣಿಗೆ ನಂತರ ಇದೀಗ ರಾಜ್ಯಪಾಲರ ಭೇಟಿಗೆ ಅವಕಾಶ ಕೇಳಿರುವುದು ಅವರು ಅಂದೇ ರಾಜಿನಾಮೆ ನೀಡಲಿದ್ದಾರೆ ಎನ್ನುವ ಸುದ್ದಿಗೆ ಮತ್ತಷ್ಟು ಇಂಬು ನೀಡಿದೆ.
ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ವಿಷಯ ಇನ್ನೂ ಹೊರಬಿದ್ದಿಲ್ಲ. ನನ್ನ ಅಭಿಪ್ರಾಯ ಕೇಳಿದರೂ ನಾನು ಹೇಳುವುದಿಲ್ಲ ಎಂದಿದ್ದಾರೆ ಯಡಿಯೂರಪ್ಪ. ಹೊಸಬರನ್ನು ಆಯ್ಕೆ ಮಾಡಲು ಕೇಂದ್ರ ನಾಯಕರು ಸಮರ್ಥರಿದ್ದಾರೆ ಎಂದಿದ್ದಾರೆ.
ರಾಜೀನಾಮೆ ವಿಚಾರ; ಸ್ಪಷ್ಟನೆ ನೀಡಿದ ಸಿಎಂ ಬಿಎಸ್ ವೈ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ