Latest

ಯಡಿಯೂರಪ್ಪ ನಿವೃತ್ತಿ: CM ಬೊಮ್ಮಾಯಿ ಮೊದಲ ಪ್ರತಿಕ್ರಿಯೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಚುನಾವಣೆ ರಾಜಕೀಯದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವೃತ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ, ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ ಎಂದು ಅವರು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಸ್ತಾಗಲಿ, ನಿವೃತ್ತಿಯಾಗಲಿ ಇಲ್ಲ. ಅವರು ನಿರಂತರ ಹೋರಾಟಗಾರರು. ಅವರು ಭಾಜಪದೊಂದಿಗೆ ಸದಾ ಇದ್ದಾರೆ. ಅವರಿಗೆ ತಮ್ಮದೇ ಆದ ಮಹತ್ವವಿದ್ದು, ಪಕ್ಷದ ವರಿಷ್ಠರಿಗೂ ಅವರ ಮಹತ್ವದ ಅರಿವಿದೆ. ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದರು.

Home add -Advt

ಯಡಿಯೂರಪ್ಪ ತಕ್ಷಣ ಶಿಕಾರಿಪುರ ಕ್ಷೇತ್ರವನ್ನು ಮಗ ವಿಜಯೇಂದ್ರ ಅವರಿಗೆ ಬಿಟ್ಟುಕೊಡುವ ಘೋಷಣೆ ಮಾಡಿರುವುದು ಬೊಮ್ಮಾಯಿ ಅವರಿಗೆ ಶಾಕ್ ನೀಡಿದಂತಿತ್ತು. ಈ ನಿರ್ಧಾರದ ಕುರಿತು ಅವರು ಮಾತನಾಡಿರಲಿಲ್ಲ. ಶೀಘ್ರದಲ್ಲೇ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಬೊಮ್ಮಾಯಿ ತಿಳಿಸಿದರು.

https://pragati.taskdun.com/latest/b-y-vijayendrashikaripuravidhanasabha-electionb-s-yedyurappa/

https://pragati.taskdun.com/latest/b-y-vijayendrashikaripurab-s-yedyurappa/

Related Articles

Back to top button