
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದು ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದ ಬಳಿ ತರಕಾರಿ ಲಾರಿ ಪಲ್ಟಿಯಾಗಿ 10 ಜನರು ಸಾವನ್ನಪ್ಪಿದ್ದರು. ಇದೇ ವೇಳೆ ರಾಯಚೂರಿನ ಸಿಂಧನೂರಿನಲ್ಲಿ ಕ್ರೂಸರ್ ವಾಹನ ಅಪಘಾತಕ್ಕೀಡಾಗಿ 4 ಜನರು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದ ಸಿಎಂ ಸಿದ್ದರಾಮಯ್ಯ, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಘೋಷಿಸುವುದಾಗಿ ತಿಳಿಸಿದ್ದರು.
ಇದೀಗ ಸಿಎಂ ಸಿದ್ದರಾಮಯ್ಯ, ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳಿಗೆ ಸರ್ಕಾರದ ವತಿಯಿಂದ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ