Kannada NewsKarnataka NewsLatest

ನಾಳೆ ಬೆಳಗಾವಿಗೆ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಾಳೆಯಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಬಾದಾಮಿ ಹಾಗೂ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ನಾಳೆ (ಜು.26) ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ರಸ್ತೆಯ ಮೂಲಕ ಬಾದಾಮಿ ವಿಧಾನಸಭೆ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶಗಳಾದ ಕೊಣ್ಣೂರು, ಗೋವಿನಕೊಪ್ಪ, ಹೆಬ್ಬಳ್ಳಿ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಸಂಜೆ 6 ಗಂಟೆಗೆ ಅಲ್ಲಿಂದ 6 ಗಂಟೆಗೆ ನಿರ್ಗಮಿಸಿ, ರಾತ್ರಿ 8.30ಕ್ಕೆ ಬೆಳಗಾವಿ ಆಗಮಿಸಿ,  ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಜುಲೈ 27ರಂದು ಬೆಳಗಾವಿ ಜಿಲ್ಲೆ ಖಾನಾಪುರ, ಸಂಕೇಶ್ವರ, ಯಮಕನಮರಡಿ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಸಂಜೆ 7.20 ಗಂಟೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು  ಪ್ರಕಟಣೆ ತಿಳಿಸಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್. ಮಹಾಂತೇಶ ಕೌಜಲಗಿ, ಗಣೇಶ ಹುಕ್ಕೇರಿ, ಮಾಜಿ ಶಾಸಕರು, ಕಾಂಗ್ರೆಸ್ ಮುಖಂಡರು ಸಾಥ್ ನೀಡಲಿದ್ದಾರೆ ಎಂದು ಬೆಳಗಾವಿ ಜಿಲ್ಲಾ  ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button