*ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೇಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಜೋರಾಗಿದ್ದು, ಇನ್ನಷ್ಟು ದಿನ ಇದೇ ರೀತಿ ಮಳೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ಬೆಳಗಾವಿ ಸೇರಿ ಒಟ್ಟು 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೀಗಾಗಿ ಹವಾಮಾನ ಇಲಾಖೆ ಒಟ್ಟು 13 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇದೇ ರೀತಿ ಮುಂದಿನ ಮೂರು ದಿನ, ಅಂದ್ರೆ ಅಕ್ಟೋಬರ್ 23ರ ವರೆಗೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.
ಇನ್ನುಳಿದಂತೆ, ಧಾರವಾಡ,ಬೆಳಗಾವಿ, ಗದಗ,ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ, ಜೊತೆಗೆ ಮೀನುಗಾರಿಕೆಗೆ ತೆರಳದಂತೆ ಕರಾವಳಿ ಭಾಗದ ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ