Belagavi NewsBelgaum NewsKarnataka News

*ಬೆಳಗಾವಿ ಸೇರಿ 10 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಈಗಾಗಲೇ ರಾಜ್ಯದ ವಿವಿಧೆಡೆ ಮಳೆ ಆರಂಭವಾಗಿದೆ. ಏಪ್ರಿಲ್ 2 ರಿಂದ ಮಳೆ ಮತ್ತಷ್ಟು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್ 2ರಿಂದ ಮಳೆ ಜೋರಾಗಲಿದ್ದು ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎನ್ನಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು ವಿಜಯನಗರ, ಶಿವಮೊಗ್ಗತುಮಕೂರು, ಮಂಡ್ಯ ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್‌ನಲ್ಲಿ ಸಾಧಾರಣ ಮಳೆಯಾಗಲಿದೆ.

ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Related Articles

Back to top button