*ಬೆಳಗಾವಿ ಸೇರಿದಂತೆ 6 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗಲಿದ್ದು ಉತ್ತರ ಕರ್ನಾಟಕದ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.
ಜೂನ್ 20 ಮತ್ತು 21 ರಂದು ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯಲ್ಲೋ ಅಲರ್ಟ್’ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 19 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು ಜೂನ್ 20 ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸದ್ಯ ಹಗುರ ಮಳೆಯಾಗುತ್ತಿದ್ದು ಜೂನ್ 20 ರ ನಂತರ ಮಳೆ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳಲಿವೆ. ಜೂನ್ 22 ಮತ್ತು 23 ರಂದು ಹೆಚ್ಚಿನ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಅಂದಾಜಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



