*ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಅಲ್ಲಲ್ಲಿ ವರುಣನ ಅಬ್ಬರ ಜೋರಾಗಿಯೇ ಇದೆ. ಅದರ ನಡುವೆ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಗದಗ, ದಾವಣಗೆರೆ, ವಿಜಯನಗರದಲ್ಲಿ ಇಂದನಿಂದ ಮುಂದಿನ ಎರಡು ದಿನಳ ವರರಗೆ ಹಾಗೂ ಚಿಕ್ಕಬಳ್ಳಾಪುರ, ತುಮಕೂರಿನಲ್ಲಿ ಇಂದು ಬಿರುಸಿನ ಮಳೆ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲ ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಕೊಂಚ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿಯಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.