Karnataka News

*ಮುಂದಿನ‌ ಐದು ದಿನ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ* 

ಪ್ರಗತಿವಾಹಿನಿ ಸುದ್ದಿ: ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಮೂರು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಅಕ್ಟೋಬರ್ 9 ರವರೆಗೆ 12 ಜಿಲ್ಲೆಗಳಿಗೆ ಯೆಲ್ಲೋ ಆರ್ಲಟ್ ಘೋಷಣೆಯಾಗಿದೆ.

Home add -Advt

ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಯಲ್ಲಿ ಇಂದಿನಿಂದ ಅಕ್ಟೋಬರ್ 10 ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಂಗಳೂರು, ಕೊಡಗು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

Related Articles

Back to top button