Kannada NewsLatestNationalPolitics

ಕೇಬಲ್ ಕಾರ್ ಯೋಜನೆಗೆ ಅನುಮತಿ ನೀಡಲು ಮನವಿ

ಪ್ರಗತಿವಾಹಿನಿ ಸುದ್ದಿ: ನವದೆಹಲಿ: ಯಳ್ಳೂರು ಕೇಬಲ್ ಕಾರ್ ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿ ಶಾಸಕ ಅಭಯ ಪಾಟೀಲ ಮನವಿ ಸಲ್ಲಿಸಿದ್ದಾರೆ.

Home add -Advt

ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಬಹುದಿನಗಳಿಂದ ಬಾಕಿ ಇರುವ ಯಳ್ಳೂರು ಕೇಬಲ್ ಕಾರ್ ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಅಭಯ ಪಾಟೀಲ ಮತ್ತೊಮ್ಮೆ ಮನವಿ ಮಾಡಿದರು.

ಯಳ್ಳೂರು ಕೇಬಲ್ ಕಾರ್ ಯೋಜನೆ ಕಾರ್ಯರೂಪಕ್ಕೆ ಬಂದರೆ ಈ ಭಾಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದ್ದು, ಇದರಿಂದ ಸ್ಥಳೀಯರಿಗೆ ವ್ಯಾಪಾರ ಹಾಗೂ ಉದ್ಯೋಗದ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ. ವಿಶೇಷವಾಗಿ ಇದು ಗಡಿ ಭಾಗವಾಗಿರುವುದರಿಂದ, ಪ್ರವಾಸೋದ್ಯಮದ ಅಭಿವೃದ್ಧಿಗೆ ಈ ಯೋಜನೆ ಮಹತ್ವದ ಕೊಡುಗೆ ನೀಡಲಿದೆ.

ಈ ಯೋಜನೆಗೆ ಅನುಮೋದನೆ ನೀಡುವಂತೆ ಈ ಹಿಂದೆ ಹಲವು ಬಾರಿ ಮನವಿ ಮಾಡಿದ್ದರೂ, ಇದುವರೆಗೆ ಅಂತಿಮ ಅನುಮೋದನೆ ದೊರೆತಿಲ್ಲ. ಈ ಬಾರಿ ಯೋಜನೆಗೆ ಶೀಘ್ರವಾಗಿ, ಅನುಮೋದನೆ ದೊರಕುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.

ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ, ಸಹಕಾರದ ಭರವಸೆ ನೀಡಿದ್ದಾರೆ ಎಂದು ಅಭಯ ಪಾಟೀಲ ತಿಳಿಸಿದ್ದಾರೆ.

Related Articles

Back to top button