Latest

ಆರ್ ಎಸ್ ಎಸ್ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ ಕೆಪಿಸಿಸಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರ್ ಎಸ್ ಎಸ್ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕದ ವಾಗ್ದಾಳಿ ತಾರಕಕ್ಕೇರಿದ್ದು, ವಿವಾದಾತ್ಮಕ  ಸ್ವರೂಪ ಪಡೆದುಕೊಂಡಿದೆ.

ಹೆಜ್ಜೆ ಹೆಜ್ಜೆಗೂ ಈ ದೇಶದ ಸ್ವಾತಂತ್ರ್ಯ ಹೋರಾಟವನ್ನು ಹೀಗಳೆಯುತ್ತಾ ಬ್ರಿಟೀಷರ ಸೈನ್ಯ ಸೇರಲು ಆರ್ ಎಸ್ ಎಸ್ ತುದಿಗಾಲಲ್ಲಿ ನಿಂತಿತ್ತು. ಈ ದೇಶದ ಸ್ವಾತಂತ್ರ್ಯಕ್ಕೆ ನಯಾಪೈಸೆ ಕೊಡುಗೆ ಕೊಡದ, ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟೀಷರಿಗೆ ಹಿಡಿದುಕೊಡುತ್ತಿದ್ದ ಆರ್ ಎಸ್ ಎಸ್ ಸಂಘಟನೆ ದೇಶದ್ರೋಹಿ ಸಂಘಟನೆ ಎಂದು ಸರಣಿ ಟ್ವೀಟ್ ಮೂಲಕ ಕೆಪಿಸಿಸಿ ಕಿಡಿಕಾರಿದೆ.

Home add -Advt

ಆರ್ ಎಸ್ ಎಸ್ ದೇಶಕ್ಕೆ ದ್ರೋಹ ಬಗೆದಿದೆ ಎಂಬುದಕ್ಕೆ ಕೆಲ ನಿದರ್ಶನ: ಎಂದು ಬರೆದುಕೊಂಡಿರುವ ಕೆಪಿಸಿಸಿ, 1929 ರ ಲಾಹೋರ್ ಅಧಿವೇಶನದಲ್ಲಿ ಅಂದಿನ ಅಧ್ಯಕ್ಷರಾದ ಜವಾಹರಲಾಲ್ ನೆಹರೂರವರು ದೇಶದ ಎಲ್ಲಾ ಸಂಸ್ಥೆಗಳ ಮೇಲೆ 1930 ಜನವರಿ 26ರಂದು ತ್ರಿವರ್ಣ ಧ್ವಜ ಹಾರಿಸಬೇಕೆಂದು ಕರೆಕೊಡುತ್ತಾರೆ, ಇದನ್ನು ನಿರಾಕರಿಸಿದ ಆರ್ ಎಸ್ಸೆಸ್ ತನ್ನ ಸಂಘದ ಕಛೇರಿಯ ಮೇಲೆ ಭಗವಾಧ್ವಜ ಹಾರಿಸುತ್ತದೆ. ಅಷ್ಟೇ ಅಲ್ಲ ತ್ರಿವರ್ಣ ಧ್ವಜವನ್ನು ಅವಮಾನಿಸುತ್ತಾ 3 ಬಣ್ಣಗಳುಳ್ಳ ಧ್ವಜ ಅನಿಷ್ಟದ ಸಂಕೇತ ಎಂದು ತನ್ನ ಮುಖವಾಣಿ “ಆರ್ಗನೈಸರ್” ಅಲ್ಲಿ ಬರೆಯುತ್ತದೆ. 55 ವರ್ಷಗಳ ಕಾಲ ರಾಷ್ಟ್ರಧ್ವಜಕ್ಕೆ ಗೌರವ ನೀಡದೆ ತನ್ನ ಸಂಘದ ಕಛೇರಿಯ ಮೇಲೆ ತ್ರಿವರ್ಣ ಧ್ವಜದ ಬದಲಾಗಿ ಭಗವಾಧ್ವಜ ಹಾರಿಸುತ್ತದೆ ಎಂದು ಹೇಳಿದೆ.

ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಕೊಂದಂಥಹ ಈ ದೇಶದ ಮೊದಲ ಭಯೋತ್ಪಾದಕ ಗೋಡ್ಸೆ ತಯಾರಾಗಿದ್ದು ಸಹ ಇದೇ ಆರ್ ಎಸ್ ಎಸ್ ಗರಡಿಯಲ್ಲೇ. ಈ ಬಗ್ಗೆ ನಾಥೂರಾಮ ಗೋಡ್ಸೆಯ ಸಹೋದರ ಗೋಪಾಲ ಗೋಡ್ಸೆ ಜನವರಿ 28 1994ರಲ್ಲಿ ಫ್ರಂಟ್ ಲೈನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಖಚಿತಪಡಿಸಿದ್ದಾನೆ. ನಾವು ಮೂರು ಜನ ಸಹೋದರರು ಅಂದರೆ ನಾಥೂರಾಮ, ನಾನು, ದತ್ತಾತ್ರೇಯ. ನಾವು ಮನೆಯಲ್ಲಿ ಬೆಳೆದೆವು ಎಂಬುದಕ್ಕಿಂತ ಆರ್ ಎಸ್ ಎಸ್ ಸಂಘಟನೆಯಲ್ಲೇ ಬೆಳೆದವು ಎಂದು ಹೇಳಬಹುದು. ಇದು ಗೋಪಾಲ ಗೋಡ್ಸೆಯ ಮಾತುಗಳು….

ಈ ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನೇ ಮುಡಿಪಿಟ್ಟ ಬಾಪೂಜೀ ಮಹಾತ್ಮ ಗಾಂಧಿಯವರು ಸತ್ತ ದಿನ ಸಿಹಿ ಹಂಚಿದ ಗುಳ್ಳೆನರಿ ಆರ್ ಎಸ್ ಎಸ್ ಹೇಗೆ ತಾನೇ ದೇಶಪ್ರೇಮಿ ಸಂಘಟನೆಯಾಗಬಲ್ಲದು? ಆರ್ ಎಸ್ ಎಸ್ ಮುಖವಾಣಿ ಆರ್ಗನೈಸರ್ 1970 ಜನವರಿ 11 ರಂದು ತನ್ನ ಸಂಪಾದಕೀಯದಲ್ಲಿ ಗಾಂಧಿಯವರ ಬಗ್ಗೆ ವಿಷಪೂರಿತ ಲೇಖನ ಪ್ರಕಟಿಸಿರಲಿಲ್ಲವೇ? ಎಂದು ಪ್ರಶ್ನಿಸಿದೆ.

ದೇಶದ ರಾಷ್ಟ್ರಧ್ವಜಕ್ಕೆ ಬೆಲೆಕೊಡದೆ ಅವಮಾನಿಸುವ, ಈ ದೇಶ ಕಂಡ ಮಹಾ ದಾರ್ಶನಿಕ ಗಾಂಧಿ ಹತ್ಯೆಯನ್ನು ಸಂಭ್ರಮಿಸುವ ಆರ್ ಎಸ್ ಎಸ್ ಈ ದೇಶದ ನಪುಂಸಕ ಸಂಘಟನೆಯೇ ಹೊರತಾಗಿ ಯಾವುದೇ ಕಾರಣಕ್ಕೂ ದೇಶಪ್ರೇಮಿ ಸಂಘಟನೆಯಾಗಲಾರದು ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿಸಿದೆ.
ಪಿಎಸ್ ಐ ಅಕ್ರಮ; ಇಬ್ಬರು ಆರೋಪಿಗಳು ಎಸ್ಕೇಪ್

Related Articles

Back to top button