Karnataka News

*ಯೋಗಗುರುವಿನಿಂದ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್*

ಪ್ರಗತಿವಹಿನಿ ಸುದ್ದಿ: ಯೋಗ ಕಲಿಯಲು ಬಂದ ಎನ್ ಆರ್ ಐ ವೈದ್ಯೆಯ ಮೇಲೆ ಯೋಗಗುರುವೇ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ಕೇವಲ ಆಶ್ರಮದಲ್ಲಿ ಈ ಕೃತ್ಯ ನಡೆದಿದ್ದು, ಸಂತ್ರಸ್ತೆ ವೈದ್ಯೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿ ಯೋಗಗುರು ಪ್ರದೀಪ್ ನನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

Home add -Advt

3 ತಿಂಗಳ ಹಿಂದೆ ಆಶ್ರಮಕ್ಕೆ ಯೋಗ, ಧ್ಯಾನ ಕಲಿಯಲು ಬಂದಿದ್ದ ಅಮೆರಿಕ ಪೌರತ್ವ ಪಡೆದಿರುವ ಪಂಜಾಬ್ ಮೂಲದ ಮಹಿಳಾ ವೈದ್ಯೆ ಮೇಲೆ ಈ ಯೋಗಗುರು ಪ್ರದೀಪ್​ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿದ್ಸಲಾಗಿದೆ. ಯೋಗಗುರು ಪ್ರದೀಪ್ ವಿರುದ್ಧ ಎನ್ಆರ್​ಐ ವೈದ್ಯೆ ಟ್ವಿಟರ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕೇವಲ ಆಶ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಿಳಿದುಕೊಂಡಿದ್ದ ವೈದ್ಯೆ, 3 ತಿಂಗಳ ಹಿಂದೆ ಕೇವಲ ಆಶ್ರಮಕ್ಕೆ ಬಂದು ನೆಲೆಸಿದ್ದರು.

ಯೋಗಗುರು ಪ್ರದೀಪ್ ಕೇವಲ ಫೌಂಡೇಷನ್‌ ಮೂಲಕ ಯೋಗ ತರಬೇತಿ ನೀಡುತ್ತಿದ್ದು, ಇಲ್ಲಿಗೆ ದೇಶ, ವಿದೇಶದ ಅನೇಕ ಮಂದಿ ಬಂದು ಯೋಗ ಶಿಕ್ಷಣ ಪಡೆಯುತ್ತಾರೆ. ಆನ್ ಲೈನ್ ಮೂಲಕವೂ ಯೋಗ ತರಬೇತಿ ನೀಡಲಾಗುತ್ತದೆ. .ಪಂಜಾಬ್‌ ಮೂಲದ ವೈದ್ಯರೊಬ್ಬರು 2020ರಲ್ಲಿ ಅಮೇರಿಕಾದಲ್ಲಿ ವೃತ್ತಿಯಲ್ಲಿದ್ದ ಸಂದರ್ಭ ಅವರ ಸ್ನೇಹಿತರಿಂದ ಕೇವಲ ಯೋಗ ಕೇಂದ್ರದ ಬಗ್ಗೆ ಮಾಹಿತಿ ಪಡೆದು ಆನ್ಲೈನ್‌ ತರಗತಿಗೆ ಸೇರಿಕೊಳ್ಳುತ್ತಾರೆ. ನಂತರ ಇಲ್ಲಿಗೆ ಬಂದು ತರಗತಿಯಲ್ಲಿ ಪಾಲ್ಗೊಳ್ಳುವಂತೆ ಪ್ರದೀಪ್‌ ಹೇಳುತ್ತಾನೆ. ಆ ಪ್ರಕಾರ ಚಿಕ್ಕಮಗಳೂರಿಗೆ ಬಂದು ಆತನ ಕೇಂದ್ರಕ್ಕೆ ಭೇಟಿ ನೀಡಿ 20 ದಿನ ತರಗತಿಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಆ ವೈದ್ಯೆಯ ಜತೆಗೆ ಸಲುಗೆ ಬೆಳೆಸಿಕೊಂಡು ಇಬ್ಬರು ಕೂಡಾ ಆತ್ಮೀಯರಾಗುತ್ತಾರೆ. ದೈಹಿಕವಾಗಿಯೂ ಆಕೆಯನ್ನು ಬಳಸಿಕೊಂಡಿದ್ದಾನೆ. ‌ನಂತರ 2020-21ರಲ್ಲೂ ಇಲ್ಲಿಗೆ ಬಂದು ಯೋಗ ತರಗತಿಯಲ್ಲಿ ಆಕೆ ಭಾಗಿಯಾಗಿದ್ದಾರೆ. ಯೋಗದ ಜತೆಗೆ ದೈಹಿಕ ಸಂಬಂಧವೂ ಮುಂದುವರೆದಿತ್ತು. ಈ ನಡುವೆ ಯೋಗಗುರು ಪ್ರದೀಪ್ ಇತರರ ಜತೆಗೂ ಇದೇ ರೀತಿ ಸಂಬಂಧ ಹೊಂದಿದ್ದಾನೆಂಬುದು ವೈದ್ಯಗೆ ಗೊತ್ತಾಗಿ ಶಾಕ್ ಆಗಿದೆ. ಇದರಿಂದ ನೊಂದ ವೈದ್ಯೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಗಗುರುವನ್ನು ಬಂಧಿಸಲಾಗಿದೆ.


Related Articles

Back to top button