ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ವಿಶೇಷ ನ್ಯಾಯಾಲಯದಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.
ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಪರ ವಕೀಲರು ಸಲ್ಲಿಸಿದ್ದ ಮನವಿ ಪುರಸ್ಕರಿಸಿದ ನ್ಯಾಯಾಲಯ ಪ್ರಕರಣವನ್ನು ಜನಪ್ರತಿನಿಧಿಗಳ ಕೋರ್ಟ್ ಗೆ ವರ್ಗಾವಣೆ ಮಾಡಿ ಆದೇಶ ನಿಡಿದೆ.
ಈ ಹಿಂದೆ ಪ್ರಕರಣ ಸಂಬಂಧದ ವಿಚಾರಣೆಯನ್ನು ಧಾರವಾಡದ ಜಿಲ್ಲಾ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಡೆಸಲಾಗುತ್ತಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ