ಪ್ರಗತಿವಾಹಿನಿ ಸುದ್ದಿ; ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ, ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದು, ಜಾಮೀನಿಗಾಗಿ ಧಾರವಾಡ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಸಿಬಿಐ ಕೋರ್ಟ್ ಅರ್ಜಿ ವಜಾಗೊಳಿಸಿತ್ತು.
ಇದನ್ನು ಪ್ರಶ್ನಿಸಿ ವಿನಯ್ ಪರ ವಕೀಲರು ಧಾರವಾಡ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಅರ್ಜಿ ವಜಾಗೊಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ