Kannada NewsKarnataka NewsLatestPolitics

*ಯೋಗೀಶ್ ಗೌಡ ಕೊಲೆ ಪ್ರಕರಣ: ಏಪ್ರಿಲ್ 15ಕ್ಕೆ ಅಂತಿಮ ತೀರ್ಪು ಮುಂದೂಡಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 15ಕ್ಕೆ ಮುಂದೂಡಿದೆ.

ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇಂದು ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳಾದ ಶಾಸಕ ವಿನಯ್ ಕುಲಕರಣಿ ಸೇರಿದಂತೆ ಎಲ್ಲಾ 21 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆದರೆ ಕೋರ್ಟ್ ತೀರ್ಪನ್ನು ಏಪ್ರಿಲ್ 15ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಈ ವೇಳೆ ಮಾತನಡಿದ ಶಾಸಕ ವಿನಯ್ ಕುಲಕರ್ಣಿ, ನನಗೆ ದೇವರ ಮೇಲೆ ಭರವಸೆ ಇದೆ. ಸತ್ಯಕ್ಕೆ ಯವತ್ತೂ ಜಯ ಸಿಗುತ್ತದೆ. ಪ್ರಕರಣ ಕೋರ್ಟ್ ನಲ್ಲಿದೆ ಹಾಗಾಗಿ ಮಾಧ್ಯಮಗಳ ಮುಂದೆ ಮಾತನಡುವುದು ಸರಿಯಲ್ಲ. ಕೋರ್ಟ್ ತೀರ್ಪು ಪ್ರಕಟಿಸಲಿ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button