Kannada NewsLatest

ವಿನಯ ಕುಲ್ಕರ್ಣಿ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ.

ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲ್ಕರ್ಣಿಯವರನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಧಾರವಾಡದ 3ನೇ ಹೆಚ್ಚುವರಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿನಯ್ ಕುಲ್ಕರ್ಣಿಯವರನ್ನು ಇನ್ನಷ್ಟು ವಿಚಾರಣೆ ನಡೆಸಲಿರುವ ಅಗತ್ಯವಿರುವುದರಿಂದ ಮತ್ತಷ್ಟು ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಸಿಬಿಐ ಅಧಿಕಾರಿಗಳು ಮನವಿ ಮಾಡಿದ್ದಾರೆ.

Home add -Advt

ಅದರಂತೆ ನ್ಯಾಯಾಲಯ ಡಿ.7ರವರೆಗೆ ಅಂದರೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.

Related Articles

Back to top button