
ರಾಜ್ಯಪಾಲರಿಗೆ ರಾಜಿನಾಮೆ ಪತ್ರ ನೀಡಿದ ಯುಪಿ ಸಿಎಂ
ಪ್ರಗತಿವಾಹಿನಿ ಸುದ್ದಿ, ಲಕ್ನೋ –
ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಬಹುಮತ ಪಡೆದ ಬೆನ್ನಲ್ಲೇ ಯೋಗಿ ಆದಿತ್ಯನಾಥ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.
೩೭ ವರ್ಷಗಳ ಬಳಿಕ ಯುಪಿಯಲ್ಲಿ ಆಡಳಿತಾರೂಢ ಪಕ್ಷವೇ ಮತ್ತೆ ಅಧಿಕಾರಕ್ಕೆ ಬಂದಿದೆ. ಒಟ್ಟು ೪೦೩ ಸ್ಥಾನಗಳ ಪೈಕಿ ೨೫೫ ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಭಾರಿಸಿದ್ದಾರೆ.
ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರುವುದು ಖಚಿತವಾಗುತ್ತಿದ್ದಂತೆ ಯೋಗಿ ಆದಿತ್ಯನಾಥ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರಾದ ಆನಂದಬೆನ್ ಪಟೇಲ್ ಅವರಿಗೆ ತಮ್ಮ ರಾಜಿನಾಮೆ ಪತ್ರ ಹಸ್ತಾಂತರಿಸಿದರು. ಅಲ್ಲದೇ ರಾಜಭವನದಲ್ಲಿರುವ ಮಹಾತ್ಮಾಗಾಂಧಿಜಿ ಪ್ರತಿಮೆಗೆ ಹೂವು ಸಮರ್ಪಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲೆ ಆನಂದಿಬೇನ್ ಪಟೇಲ್ ಅವರು ಬಿಜೆಪಿ ಬಹುಮತ ಪಡೆದಿದ್ದಕ್ಕಾಗಿ ಯೋಗಿ ಅವರನ್ನು ಅಭಿನಂದಿಸಿದರು.
ರಾಜೀನಾಮೆ ಸಲ್ಲಿಸುವುದಕ್ಕೂ ಪೂರ್ವದಲ್ಲಿ ಯೋಗಿ ಆದಿತ್ಯನಾಥ ಅವರು ತಮ್ಮ ಸರ್ಕಾರದ ಮಂತ್ರಿಗಳೊಂದಿಗೆ ಈ ಸಾಲಿನ ಕೊನೇಯ ಕ್ಯಾಬಿನೇಟ್ ಮೀಟಿಂಗ್ ನಡೆಸಿದರು.
ಕಳೆದ ಚುನಾವಣೆಯಲ್ಲಿ ಬಿಜೆಪಿ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಚುನಾವಣೆ ಎದುರಿಸಿತ್ತು. ಮೋದಿ ಹವಾದಲ್ಲಿ ಎದುರಾಳಿಗಳು ಕೊಚ್ಚಿ ಹೋಗಿದ್ದರು. ಈ ಬಾರಿ ಯೋಗಿ ಆದಿತ್ಯನಾಥ ಅವರೇ ಮುಂದಿನ ಮುಖ್ಯಮಂತ್ರಿ ಎಂಬ ಘೋಷಣೆಯೊಂದಿಗೆ ಕಣಕ್ಕಿಳಿದ ಬಿಜೆಪಿ ಸರ್ಕಾರ ರಚನೆಗೆ ಬೇಕಾದ ಸ್ಥಾನಗಳನ್ನು ಪಡೆದಿದೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ ಅವರೇ ಮತ್ತೆ ಉತ್ತರಪ್ರದೇಶದ ಮುಖ್ಯಮಂತ್ರಿ ಸ್ಥಾನ ಅಲಂಕರಿಸುವುದು ನಿಶ್ಚಯವಾಗಿದೆ.
ಪಂಚ ರಾಜ್ಯ ಚುನಾವಣೆ ಫಲಿತಾಂಶ: ಸದನದಲ್ಲಿ ಅಬ್ಬರಿಸಿದ ಯಡಿಯೂಪ್ಪ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ