Kannada NewsLatestNationalPolitics

*ದೀಪಾವಳಿ, ಹೋಳಿ ಹಬ್ಬಕ್ಕೆ ಬಂಪರ್ ಗಿಫ್ಟ್ ಘೋಷಿಸಿದ ಸಿಎಂ ಯೋಗಿ ಆದಿತ್ಯನಾಥ್*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ ಜನತೆಗೆ ಮಹತ್ವದ ಘೋಷಣೆ ಮಾಡಿದ್ದಾರೆ.

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ನೋಂದಾಯಿಸಿಕೊಂಡಿರುವ ಅರ್ಹ ಬಡ ಕುಟುಂಬಗಳಿಗೆ ದೀಪಾವಳಿ ಮತ್ತು ಹೋಳಿ ಹಬ್ಬದ ಸಂದರ್ಭದಲ್ಲಿ ತಲಾ ಒಂದು ಉಚಿತ ಎಲ್‌ಪಿಜಿ ಸಿಲಿಂಡರ್ ನೀಡುವುದಾಗಿ ಘೋಷಿಸಿದ್ದಾರೆ.

ಮಂಗಳವಾರ ರಾಜ್ಯದ 1.89 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಎಲ್‌ಪಿಜಿ ಸಿಲಿಂಡರ್ ಮರುಪೂರಣದ ಸಬ್ಸಿಡಿ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈ ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಅರ್ಹ ಕುಟುಂಬಗಳಿಗೆ ಸಿಲಿಂಡರ್ ಮರುಪೂರಣದ ಸಬ್ಸಿಡಿ ನೀಡಲು ರಾಜ್ಯ ಸರ್ಕಾರ 1,500 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತು ಕೇಂದ್ರ ಸರ್ಕಾರ ನೀಡುತ್ತಿರುವ ಸಬ್ಸಿಡಿ ಕುರಿತು ಮಾಹಿತಿ ನೀಡಿದರು. ಒಂದು ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 983.45 ರೂಪಾಯಿ ಇದೆ. ಇದರಲ್ಲಿ ಕೇಂದ್ರ ಸರ್ಕಾರ 335 ರೂಪಾಯಿ ಸಬ್ಸಿಡಿ ನೀಡುತ್ತಿದ್ದು, ಫಲಾನುಭವಿಗಳು ತಮ್ಮ ಕಿಸೆಯಿಂದ 648.55 ರೂಪಾಯಿ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದರು.

ಬಡ ಕುಟುಂಬಗಳ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ದೀಪಾವಳಿ ಮತ್ತು ಹೋಳಿ ಹಬ್ಬದ ಸಂದರ್ಭದಲ್ಲಿ ತಲಾ ಒಂದು ಉಚಿತ ಸಿಲಿಂಡರ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಿಲಿಂಡರ್ ಖರೀದಿಗೆ ಖರ್ಚು ಮಾಡಬೇಕಿದ್ದ ಹಣ ಉಳಿತಾಯವಾಗುವುದರಿಂದ ಆ ಹಣದಲ್ಲಿ ದೀಪಾವಳಿಗೆ ಸಿಹಿತಿಂಡಿ ಹಾಗೂ ಹಣತೆಗಳನ್ನು ಖರೀದಿಸಬಹುದು ಎಂದರು.

Related Articles

Back to top button