ಪ್ರಗತಿವಾಹಿನಿ ಸುದ್ದಿ; ಮಂಡ್ಯ: ವಿಧನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸಿದ್ದಾರೆ. ಜೆಡಿಎಸ್ ಭದ್ರ ಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ಮಂಡ್ಯ ಬಿಜೆಪಿ ಅಭ್ಯರ್ಥಿ ಪರ ಸಿಎಂ ಯೋಗಿ ಆದಿತ್ಯನಾಥ್ ಭರ್ಜರಿ ಮತ ಬೇಟೆ ಆರಂಭಿಸಿದ್ದಾರೆ. ಸಂಜಯ ವೃತ್ತದಿಂದ ಮಹಾವೀರ ಥಿಯೆಟರ್ ವರೆಗೆ ಯೋಗಿ ಆದಿತ್ಯನಾಥ್ ರೋಡ್ ಶೋ ಸಾಗಿದ್ದು, ಮೆರವಣಿಗೆಯುದ್ದಕ್ಕೂ ಜನರು ಹೂವಿನ ಮಳೆಗರೆದು ಸ್ವಾಗತಿಸಿದ್ದಾರೆ. ಯೋಗಿ ಆದಿತ್ಯನಾಥ್ ಪರ ಜಯಘೋಷಗಳನ್ನು ಕೂಗಿದ್ದಾರೆ. ರೋಡ್ ಶೋ ಉದ್ದಕ್ಕೂ ಸಾಂಸ್ಕೃತಿಕ ಕಲಾತಂಡಗಳು ಸಾಗಿವೆ.
ರೋಡ್ ಶೋನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸಚಿವ ಅಶ್ವತ್ಥನಾರಾಯಣ, ಸಂಸದೆ ಸುಮಲತಾ ಸಾಥ್ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ