Kannada NewsNationalPolitics

*ಸಿಎಂ ಯೋಗಿ ಆದಿತ್ಯನಾಥ್‌ ತಾಯಿ ವಿಧಿವಶ*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ತಾಯಿ ಸಾವಿತ್ರಿ ದೇವಿ ಅವರು ಇಂದು ವಿಧಿವಶರಾಗಿದ್ದಾರೆ.

ಸಾವಿತ್ರಿ ದೇವಿ ಅವರಿಗೆ 91 ವರ್ಷ ವಯಸ್ಸಾಗಿತ್ತು. ಅವರು ದೀರ್ಘಕಾಲದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಉತ್ತರಾಖಂಡ್‌ನ ಪೌರಿ ಗರ್ವಾಲ್‌ ಜಿಲ್ಲೆಯಲ್ಲಿರುವ ತಮ್ಮ ಪೂರ್ವಜರ ಮನೆಯಲ್ಲಿ ಸಾವಿತ್ರಿ ದೇವಿ ನಿಧನ ಹೊಂದಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್‌ ಸಹೋದರ ಮಹೇಂದ್ರ ಅವರು ತಮ್ಮ ತಾಯಿಯ ನಿಧನವನ್ನು ಖಚಿತಪಡಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಸಾವಿತ್ರಿ ದೇವಿ ಅವರನ್ನು ರಿಷಿಕೇಶ್‌ನ ಏಮ್ಸ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದ ಬಳಿಕ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ಅವರು ತಮ್ಮ ಪೂರ್ವಜರ ಮನೆಯಲ್ಲಿ ಕೊನೆಯುಸಿರೆಳೆದರು.

Related Articles

Back to top button