
ಪ್ರಗತಿವಾಹಿನಿ ಸುದ್ದಿ; ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಧಾರವಾಡದ ಮೂರನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಚಂದ್ರಶೇಖರ್ ಇಂಡಿ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಡಿ.28ರವರೆಗೆ ಚಂದ್ರಶೇಖರ ಇಂಡಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.