Latest

ಮಾಜಿ ಸಚಿವ ವಿನಯ್ ಕುಲ್ಕರ್ಣಿಗೆ ಹಿನ್ನಡೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯನ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿಗೆ ಹಿನ್ನಡೆಯಾಗಿದೆ.

ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಪ್ರಶ್ನಿಸಿ ವಿನಯ್ ಕುಲ್ಕರ್ಣಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲ್ಕರ್ಣಿಗೆ ಸುಪ್ರೀಂ ನಲ್ಲಿ ಹಿನ್ನಡೆಯಾಗಿದೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ 2019ರಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿತ್ತು. ಸಿಬಿಐ ತನಿಖೆ ಪ್ರಶ್ನಿಸಿ ವಿನಯ್ ಕುಲ್ಕರ್ಣಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಬ್ಲ್ಯಾಕ್ ಮೇಲ್ ಪ್ರಕರಣ; ಮಹಿಳೆಯ ವಿರುದ್ಧ ದೂರು ದಾಖಲಿಸಿದ ಬಿಜೆಪಿ ಶಾಸಕ

Related Articles

Back to top button