Kannada NewsKarnataka NewsLatest
ನೀವು ಮನೆಯಲ್ಲೇ ಇರಿ, ನಿಮ್ಮ ಸುರಕ್ಷತೆ ಮುಖ್ಯ, ನಾನೇ ನಿಮ್ಮಲ್ಲಿಗೆ ಬರುತ್ತೇನೆ -ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕ್ಷೇತ್ರದ ಜನರ ಆರೋಗ್ಯದ ಕಾಳಜಿ ಹಿನ್ನೆಲೆಯಲ್ಲಿ ತಮ್ಮ ಮನೆಯನ್ನು ಸೆಲ್ಫ್ ಕ್ವಾರಂಟೈನ್ ಮಾಡಿಕೊಂಡಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ತಾವೇ ಸ್ವತಃ ಪ್ರತಿ ಗ್ರಾಮಕ್ಕೆ ತೆರಳಿ ಕೊರೋನಾ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಗ್ರಾಮದ ಮನೆ ಮನೆಗೆ ಹಾಗೂ ಗಟಾರಗಳಿಗೂ ಔಷಧಗಳನ್ನು ಸಿಪಡಿಸಲಾಯಿತು. ಕೊರೋನಾ ಬರದಂತೆ ಯಾವ ರೀತಿಯಲ್ಲಿ ಮುಂಜಾಗ್ರತೆ ವಹಿಸಬೇಕೆನ್ನುವ ಕುರಿತು ಜನರಿಗೆ ತಿಳಿವಳಿಕೆ ನೀಡಲಾಯಿತು.
ಲಾಕ್ ಡೌನ್ ವೇಳೆಯಲ್ಲಿ ಯಾರೊಬ್ಬರೂ ಅನವಶ್ಯಕವಾಗಿ ಹೊರಗಡೆ ಬರದೆ ಕುಟುಂಬದವರ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ಆರೋಗ್ಯವಿದ್ದರೆ ಎಲ್ಲವೂ ಇರುತ್ತದೆ. ಸ್ವಲ್ಪ ದಿನ ತಾಳ್ಮೆ ವಹಿಸಿದರೆ ಮುಂದೆ ಎಲ್ಲವೂ ಸರಿಯಾಗಲಿದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.

ಸರಕಾರದ ಜೊತೆಗೆ ಕಾಂಗ್ರೆಸ್ ಪಾರ್ಟಿ ಕೂಡ ಕೊರೋನಾ ವಿರುದ್ದದ ಹೋರಾಟದಲ್ಲಿ ಸಕ್ರೀಯವಾಗಿ ತೊಡಗಿಕೊಂಡಿದೆ. ಈ ವಿಷಯದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ಕಾಂಗ್ರೆಸ್ ಪಾರ್ಟಿ ಪರವಾಗಿಯೂ ಹಲವಾರು ವೈದ್ಯರನ್ನು ನೇಮಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಚಿತವಾಗಿ ಮಾಸ್ಕ್, ಸೆನಿಟೈಸರ್ ಗಳನ್ನು ವಿತರಿಸಲಾಗುತ್ತಿದೆ. ಎಲ್ಲೆಡೆ ಪಕ್ಷದ ಮುಖಂಡರು, ಕಾರ್ಯಕರ್ತರು ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳಕರ್ ವಿವರಿಸಿದರು.
ಅಭಿಯಾನದ ವೇಳೆ ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಗಳನ್ನು ಧರಿಸಲಾಗಿತ್ತು. ಗ್ರಾಮದ ಜನರ ಅಹವಾಲುಗಳನ್ನು ಆಲಿಸಿದ ಶಾಸಕಿ ಹೆೆಬ್ಬಾಳಕರ್, ಅವುಗಳಿಗೆ ಸೂಕ್ತವಾಗಿ ಸ್ಪಂದಿಸಿದರು.
ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಮತ್ತಿತರರು ಉಪಸ್ಥಿತರಿದ್ದರು.
ಸರಕಾರದ ಜೊತೆಗೆ ಕಾಂಗ್ರೆಸ್ ಪಾರ್ಟಿ ಕೂಡ ಕೊರೋನಾ ವಿರುದ್ದದ ಹೋರಾಟದಲ್ಲಿ ಸಕ್ರೀಯವಾಗಿ ತೊಡಗಿಕೊಂಡಿದೆ. ಈ ವಿಷಯದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ಕಾಂಗ್ರೆಸ್ ಪಾರ್ಟಿ ಪರವಾಗಿಯೂ ಹಲವಾರು ವೈದ್ಯರನ್ನು ನೇಮಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಚಿತವಾಗಿ ಮಾಸ್ಕ್, ಸೆನಿಟೈಸರ್ ಗಳನ್ನು ವಿತರಿಸಲಾಗುತ್ತಿದೆ. ಎಲ್ಲೆಡೆ ಪಕ್ಷದ ಮುಖಂಡರು, ಕಾರ್ಯಕರ್ತರು ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ
– ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ