
ಪ್ರಗತಿವಾಹಿನಿ ಸುದ್ದಿ; ಯಲ್ಲಾಪುರ: ಹೆಣ್ಣು ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದ ಕೃಷಿಕ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ.
ನಾಗರಾಜ್ ಗಣಪತಿ ಗಾಂವ್ಕಾರ್ (35) ಮೃತ ಯುವಕ. ಯಲ್ಲಾಪುರ ತಾಲೂಕಿನ ತೆಲಂಗಾರ ಕಿರಗಾರಿ ಮನೆ ನಿವಾಸಿ. ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಯುವಕನಿಗೆ ಮದುವೆಗೆ ಹೆಣ್ಣು ಸಿಗುತ್ತಿರಲಿಲ್ಲ. ಸಂಬಂಧಿಕರು, ಬ್ರೋಕರ್ ಗಳ ಬಳಿಯೂ ಕನ್ಯೆ ಹುಡುಕಿಕೊಡುವಂತೆ ಹೇಳಿದ್ದ. ಆದರೆ ನಾಗರಾಜ್ ಗೆ ಹೆಣ್ಣು ಸಿಗುತ್ತಿರಲಿಲ್ಲ. ಮದುವೆಯ ಕನಸು ಕನಸಾಗೆಯೇ ಉಳಿದಿತ್ತು.
ಇದರಿಂದ ಮಾನಸಿಕವಾಗಿ ನೊಂದಿದ್ದ ನಾಗರಾಜ್, ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಮನನೊಂದು ನಾಗರಾಜ್ ಮನೆಯ ಬಳಿಯ ಗುಡ್ಡಕ್ಕೆ ತೆರಳಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ