*ಅಪ್ರಾಪ್ತ ಯುವತಿಯ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಯುವಕನಿಂದಲೇ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಹೆದ್ದಾರಿ 48ರ ಬಳಿ ಅಪ್ರಾಪ್ತ ಯುವತಿಯ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕ್ಯಾಅನ್ಸರ್ ಮೂರನೆ ಹಂತದಲ್ಲಿದ್ದ ಯುವಕನೇ ಯುವತಿಯ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದ ವರ್ಷಿತಾ (19) ಎಂಬ ವಿದ್ಯಾರ್ಥಿನಿ ಶವ ರಾಷ್ಟ್ರೀಯ ಹೆದ್ದಾರಿಯಲ್ಲಿ ಪತ್ತೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರುಗೆ ಇದು ಕೊಲೆ ಎಂಬುದು ಗೊತ್ತಾಗಿದೆ. ಚೇತನ್ ಎಂಬ ಯುವಕ ವರ್ಷಿತಾ ಸಂಪರ್ಕದಲ್ಲಿದ್ದ. ಈ ನಿಟ್ಟಿನಲ್ಲಿ ತನಿಖೆ ಕೈಗೊಂಡಾಗ ಚೇತನ್ ಎಂಬ ಯುವಕ ವರ್ಷಿತಾ ಕೊಲೆ ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
ಆದರೆ ಆರೋಪಿ ಯುವಕ ಚೇತನ್, ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಕ್ಯಾನ್ಸರ್ ಮೂರನೇ ಹಂತದಲ್ಲಿದೆ ಎಂದು ತಿಳಿದುಬಂದಿದೆ. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ಸದ್ಯ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ವರ್ಷಿತಾ ಬೇರೊಬ್ಬ ಯುವಕನ ಜೊತೆ ಸಂಪರ್ಕದಲ್ಲಿದ್ದಳು. ಇದೇ ಕಾರಣಕ್ಕೆ ಕೊಲೆ ಮಾಡಿದ್ದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ. ಗೋರುಬಳಿ ಆಕೆಯನ್ನು ಕರೆದೊಯ್ದು ಹೊಡೆದಿದ್ದಾಗಿ. ಹೊಡೆಯುತ್ತಿದಂತೆ ನೆಲಕ್ಕೆ ಬಿದ್ದ ವರ್ಷಿತಾ ಅಲ್ಲಿಯೇ ಸಾವನ್ನಪ್ಪಿದ್ದಳು. ಬಳಿಕ ಪೆಟ್ರೋಲ್ ಸುರಿದು ಶವ ಸುಟ್ಟು ಹಾಕಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.