
ಪ್ರಗತಿವಾಹಿನಿ ಸುದ್ದಿ: 16 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.
ಕುಸುಮಾ (16) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮನೆಯಲ್ಲಿಯೇ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಎಸ್ ಎಸ್ ಎಲ್ ಸಿ ಓದುತ್ತಿದ್ದ ಯುವತಿ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೋಷಕರು ಆಘಾತಕ್ಕೀಡಾಗಿದ್ದಾರೆ.
ಮಾದನಾಯಕನಹಳ್ಳಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ. ಯುವತಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.