
ಪ್ರಗತಿವಾಹಿನಿ ಸುದ್ದಿ: ಕೇವಲ 24 ವರ್ಷದ ಯುವತಿಯೊಬ್ಬರು ಮನೆಯಲ್ಲಿಯೇ ಏಕಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ನಾಪೊಕ್ಲು ಬಳಿಕ ನೆಲಜಿ ಗ್ರಾಮದ ಮನೆಯಲ್ಲಿ ಯುವತಿ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿಲಿಕ ಪೊನ್ನಪ್ಪ (24) ಮೃತ ಯುವತಿ.
ಯುವತಿಗೆ ಯಾವುದೇ ಆರೋಗ್ಯ ಸಮಸ್ಯೆಯೂ ಇರಲಿಲ್ಲ. ಆರಾಮವಾಗಿಯೇ ಇದ್ದ ಯುವತಿ ಎಂದಿನಂತೆ ಕೆಲಸಕ್ಕೆಂದು ಆಫೀಸಿಗೆ ಹೋಗಲು ಬೆಳಿಗ್ಗೆ ಸಿದ್ಧವಾಗುತ್ತಿದ್ದರು. ಈ ವೇಳೆ ಮನೆಯಲ್ಲಿಯೇ ಕುಸಿದುಬಿದ್ದು, ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ