
ಪ್ರಗತಿವಾಹಿನಿ ಸುದ್ದಿ: ಯುವತಿಯರ ಫೋಟೋಗಖನ್ನು ಅಸಭ್ಯವಾಗಿ ಕಾನುವಂತೆ ಮಾಡಿ ಇನ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡುತ್ತಿದ್ದ ಯುವಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಅಶೋಕ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 19 ವರ್ಷದ ಹುಸೇನ್ ಬಂಧಿತ ಆರೋಪಿ. ದಿಲ್ಬರ್ ಜಾನಿ ಎಂಬ ಇನ್ ಸ್ಟಾಗ್ರಾಂ ಖಾತೆಯಲ್ಲಿ ಯುವತಿಯ್ತರ ಅಶ್ಲೀಲ ಫೋಟೋಗಳನ್ನು ಅಪ್ ಲೋಡ್ ಮಾಡುತ್ತಿದ್ದ.
ಎಂ.ಜಿ.ರೋಡ್, ಬ್ರಿಗೇಡ್ ರೋಡ್ ನಂತಹ ಸ್ಥಳಗಳಲ್ಲಿ ರಾತ್ರಿ ವೇಳೆ ಯುವತಿಯರ ಫೋಟೋಗಳನ್ನು ಕ್ಲಿಕಿಸಿಕೊಂಡು, ವಿಡಿಯೋ ತೆಗೆದು ಅವುಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಬೆಂಗಳೂರು ನೈಟ್ ಲೈಫ್ ಎಂದು ಬರೆದು ಪೋಸ್ಟ್ ಮಾಡುತ್ತಿದ್ದ. ಸಾಮಾಜಿಕ ಜಾಲತಾಅಣಗಳ ಮೇಲೆ ನಿಗಾ ವಹಿಸಿದ್ದ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಯುವಕನನ್ನು ಬಂಧಿಸಿದ್ದಾರೆ.