Latest

*ಸಂಭ್ರಮಾಚರಣೆ ವೇಳೆ ದುಷ್ಕರ್ಮಿಗಳಿಂದ ದಾಳಿ: ಯುವಕನಿಗೆ ಚಾಕು ಇರಿತ*

ಪ್ರಗತಿವಾಹಿನಿ ಸುದ್ದಿ: ರಾಯಲ್ ಚಾಲೇಂಜರ್ಸ್ ಬೆಂಗಳೂರು ಮೊದಲ ಐಪಿಎಲ್ ಟ್ರೋಫಿ ಗೆದ್ದು ಬೀಗಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಿಡಿ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ಈ ವೇಳೆ ದುಷ್ಕರ್ಮಿಗಳ ಗುಂಪು ಯುವಕನಿಗೆ ಚಾಕು ಇರಿದ ಘಟನೆ ನಡೆದಿದೆ.

ಪೀಣ್ಯದ ಜಾಲಹಳ್ಳಿ ಕ್ರಾಸ್ ಬಳಿ ದುಷ್ಕರ್ಮಿಗಳ ಗುಂಪು ಯುವಕನ ಮೇಲೆ ಚಾಕುವಿನಿಂದ ಇರಿದು ಕ್ರೌರ್ಯ ಮೆರೆದಿದೆ. ಸ್ಥಳದಲ್ಲಿದ್ದವರು ಪ್ರತಿರೋಧಿಸುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಗಾಯಾಳು ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಯುವಕ ಚೇತರಿಸಿಕೊಳ್ಳುತ್ತಿದ್ದಾನೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button