ಪ್ರಗತಿವಾಹಿನಿ ಸುದ್ದಿ, ಖಾನಾಪುರ – ಕರಡಿ ದಾಳಿಗೆ ಯುವಕನೋರ್ವ ಬಲಿಯಾಗಿದ್ದಾನೆ.
ಖಾನಾಪುರ ತಾಲೂಕಿನ ಅಮಟೆ ಗ್ರಾಮದ ಹೊರವಲಯದ ಅರಣ್ಯದಲ್ಲಿ ಘಟನೆ ನಡೆದಿದೆ.
ದನಕರು ಮೇಯಿಸಲು ಅರಣ್ಯಕ್ಕೆ ತೆರಳಿದ್ದ ಅಮಟೆ ನಿವಾಸಿ ರವಿ ನಾಯಕ್ (೨೮) ಮೃತ ಯುವಕ.
ಘಟನಾ ಸ್ಥಳಕ್ಕೆ ಖಾನಾಪುರ ಪೊಲೀಸರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಖಾನಾಪುರ ಅರಣ್ಯದಲ್ಲಿ ಮಾನವ -ವನ್ಯಜೀವಿ ಸಂಘರ್ಷ ಹೆಚ್ಚುತ್ತಿರುವುದಕ್ಕೆ ಸ್ಥಳೀಯರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಮೃತನ ಕುಟುಂಬಕ್ಕೆ ಸ್ಥಳದಲ್ಲೇ ಪರಿಹಾರ ಘೋಷಿಸುವಂತೆ ಗ್ರಾಮಸ್ಥರ ಪಟ್ಟು ಹಿಡಿದಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾದೇವ ಕೋಳಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಶಾಸಕಿ ಡಾ.ಅಂಜಲಿ ನಿಂಬಾಳಕರ್ ದೂರವಾಣಿ ಮೂಲಕ ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿ ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ