Kannada NewsKarnataka NewsLatest

*ರಾತ್ರಿಯಿಡಿ ಡ್ಯಾನ್ಸ್ ಮಾಡಿದ್ದ ಯುವಕ ಹೃದಯಾಘಾತಕ್ಕೆ ಬಲಿ*

ಪ್ರಗತಿವಾಹಿನಿ ಸುದ್ದಿ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆಗೆ ಡ್ಯಾನ್ಸ್ ಮಾಡುತ್ತಿರುವಾಗಲೇ ರಾಯಚೂರು ನಗರದ ಮಂಗಳವಾರ ಪೇಟೆಯ ಯುವಕ ಅಭಿಷೇಕ್ (24) ಕುಸಿದುಬಿದ್ದು ಮೃತಪಟ್ಟಿದ್ದಾನೆ. 

ರಾತ್ರಿಯಿಡಿ ಡ್ಯಾನ್ಸ್ ಮಾಡಿದ್ದ ಅಭಿಷೇಕ್ ಬೆಳಗಿನ ಜಾವ ಗಣೇಶ ವಿಸರ್ಜನೆ ಮಾರ್ಗ ಮಧ್ಯೆ ರಾಯಚೂರು ನಗರದ ತೀನ್ ಖಂದಿಲ್ ಸರ್ಕಲ್ ಬಳಿ ಕುಸಿದು ಬಿದ್ದಿದ್ದು, ಕೂಡಲೇ ಅಭಿಷೇಕ್ ನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ‌ಫಲಕಾರಿಯಾಗದೇ ಯುವಕ ಅಭಿಷೇಕ್ ಕೊನೆಯುಸಿರೆಳೆದಿದ್ದಾನೆ.

ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಗ್ರಾಮದ ಯುವಕರ ಜೊತೆ ಅಭಿಷೇಕ್ ಕೂಡ ಭರ್ಜರಿ ಸ್ಟೆಪ್ ಹಾಕುತ್ತಿದ್ದ. ಆದರೆ ತೀನ್ ಖಂದಿಲ್ ಸರ್ಕಲ್ ಬಳಿ ಡಾನ್ಸ್ ಮಾಡುತ್ತಿದ್ದಂತೆ ಏಕಾಏಕಿ ಕುಸಿದು ಬಿದ್ದಿದ್ದಾನೆ. ಇದನ್ನು ಗಮನಿಸಿದ ಯುವಕರು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸತತವಾಗಿ ಡಾನ್ಸ್ ಮಾಡುತ್ತಾ ಇದ್ದ ಅಭಿಷೇಕ್ ಧಿಡೀರ್ ಆಗಿ ಕುಸಿದು ಬಿದ್ದಿರೋದನ್ನು ನೋಡಿದ ಯುವಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಭಿಷೇಕ್ ಕೊನೆಯುಸಿರೆಳೆದಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಯಚೂರು ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Home add -Advt

Related Articles

Back to top button