Karnataka News

*ಹೋಟೆಲ್ ಗೆ ನುಗ್ಗಿ ಯುವಕನ ಕೈ ಕತ್ತರಿಸಿದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವಕನ ಮೇಲೆ ಭಯಾನಕ ದಾಳಿ ನಡೆದಿದೆ. ದುಷ್ಕರ್ಮಿಗಳ ಗ್ಯಾಂಗ್ ಹಾಡ ಹಗಲೇ ಹೋಟೆಲ್ ಗೆ ನುಗ್ಗಿ ಯುವಕನ ಕೈ ಕತ್ತರಿಸಿ ಅಟ್ಟಹಾಸ ಮೆರೆದಿದೆ.

ಬೆಂಗಳೂರಿನ ದೇವನಹಳ್ಳಿ ಬಳಿಯ ಸಾದಹಳ್ಳಿ ಗೇಟ್ ಬಳಿಯ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಯುವಕ. ಏಕಾಏಕಿ ಹೊತೆಲ್ ಗೆ ನುಗ್ಗಿದ ಗ್ಯಾಂಗ್ ಮಾರಕಾಸ್ತ್ರಗಳಿಂದ ಮಂಜುನಾಥ್ ಮೇಲೆ ದಾಳಿ ನಡೆಸಿದ್ದು, ಒಂದು ಕೈ ಕಟ್ ಆಗಿದೆ. ಕುಸಿದು ಬಿದ್ದ ಮಂಜುನಾಥ್ ಪರಿ ಪರಿಯಾಗಿ ಬೇಡಿ ಕೊಂದರೂ ಬಿಡದ ದುಷ್ಕರ್ಮಿಗಳು ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಯುವಕನ ಕಾಲುಗಳಿಗೂ ಗಂಭೀರವಾಗಿ ಗಾಯಗಳಾಗಿವೆ.

ದುಷ್ಕರ್ಮಿಗಳ ಕೃತ್ಯಕ್ಕೆ ಹೋಟೆಲ್ ಸಿಬ್ಬಂದಿ, ಗ್ರಾಹಕರು ಬೆಚ್ಚಿ ಬಿದ್ದಿದ್ದಾರೆ. ರಕ್ತದ ಮಡುವಲ್ಲಿ ಬಿದ್ದಿದ್ದ ಮಂಜುನಾಥ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಲಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button