Kannada NewsKarnataka NewsLatest

*ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ: ಪಿಎಸ್ಐ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಇದು ಆರಕ್ಷಕನೇ ಭಕ್ಷಕನಾದ ಘಟನೆ. ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಂಕಿ ಠಾಣೆಯ ಪಿಎಸ್‌ಐ ಓರ್ವನನ್ನು ಬಂಧಿಸಲಾಗಿದೆ.

ಅಭಿನಂದನ್ ಗೌಡ ಬಂಧಿತ ಪಿಎಸ್ ಐ. 16 ವರ್ಷದ ಬಾಲಕಿಯನ್ನು ಭಟ್ಕಳದ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಮೇಲೆ ಭಟ್ಕಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಗಿತ್ತು.

ತನಿಖೆ ನಡೆಸಿದ ಪೊಲೀಸರು ಇದೀಗ ಪಿಎಸ್ ಐ ಅಭಿನಂದನ್ ನನ್ನು ಬಂಧಿಸಿದ್ದಾರೆ. ಭಟ್ಕಳ ಠಾಣೆಯಲ್ಲಿ ಅಭಿನಂದನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

Related Articles

Back to top button