Belagavi NewsBelgaum News

*ಹಸೆಮಣೆಯೇರಲು ಸಿದ್ಧನಾಗಿದ್ದ ಮದುಮಗ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಮದುವೆಗೆ ಒಂದು ದಿನ ಬಾಕಿ ಇರುವಾಗ ಮದುಮಗ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.

ಝಂಜರವಾಡದ ಆ.ಸಿ ಗ್ರಾಮದ ಯುವಕ ಸದಾಶಿವ (31) ಮೃತ ದುರ್ದೈವಿ. ಸೆ.5ರಂದು ಯುವಕ ಸದಾಶಿವನ ಮದುವೆ ನಿಶ್ಚಯವಾಗಿತ್ತು. ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು. ನಾಳೆ ಮದುವೆಯಿರುವುದರಿಂದ ಮನೆಯಲ್ಲಿ ತಳಿರು ತೋರಣಗಳಿಂದ ಅಲಂಕರಿಸುವುದರಲ್ಲಿ ಸಂಬಮ್ಧಿಕರು ಬ್ಯುಸಿಯಿದ್ದರು.

ಮದುಮಗ ಫೋನ್ ನಲ್ಲಿ ಮಾತನಾಡುತ್ತಿದ್ದ. ಈ ವೇಲೆ ಹಠಾತ್ ಹೃದಯಾಘಾತ ಸಂಭವಿಸಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ತಕ್ಷಣ ಯುವಕನನ್ನು ಆಸ್ಪತೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲೇ ಆತ ಸಾವನ್ನಪ್ಪಿದ್ದ ಎಂದು ತಿಳಿದುಬಂದಿದೆ.

ಇದ್ದ ಒಬ್ಬ ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಐಗುಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button