CrimeKarnataka NewsLatest

*BREAKING: ಮತ್ತೊಂದು ತ್ರಿಬಲ್ ಮರ್ಡರ್: ತಾಯಿ, ಅಜ್ಜಿ, ಮಾವನನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಯುವಕ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವಕನೊಬ್ಬ ತಾಯಿ, ಅಜ್ಜಿ ಹಾಗೂ ಮಾವನನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ.

ಬೆಂಗಳೂರಿನ ಕೊಟ್ಟಿಗೆಪಾಳ್ಯದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಹಾಗೂ ಮಾವ ಸತೀಶ್ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಶಾಂತ್ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಯಾವ ಕಾಅರಣಕ್ಕೆ ಯುವಕ ಕೊಲೆಗೈದಿದ್ದನೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button