Latest

*ಕೋರ್ಟ್ ಆವರಣದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಯುವಕ*

ಪ್ರಗತಿವಾಹಿನಿ ಸುದ್ದಿ: ಕೋರ್ಟ್ ಆವರಣದಲ್ಲಿಯೇ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.

ವಿಡೀಯೋ ಮಾಡಿ ವಿಷ ಕುಡಿದು ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಕಡೂರು ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ.

ಜಮೀನಿಗೆ ಸಂಬಂಧಿಸಿದ ವ್ಯಾಜ್ಯದಲ್ಲಿ ತನಗೆ ನ್ಯಾಯ ಸಿಗಲಿಲ್ಲ ಎಂದು ಮನನೊಂದ ಯುವಕ ಕೋರ್ಟ್ ಆವರಣದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt


Related Articles

Back to top button