Kannada NewsKarnataka NewsLatest

*ಮದುವೆಗೆ ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮನ ನೊಂದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೋರಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿ ಕುಮಾರ್ (26) ಮೃತಪಟ್ಟ ದುರ್ದೈವಿ. ಕುಮಾರ್ ಕಡೂರು ತಾಲ್ಲೂಕಿನ ಬೋರಗಾನಹಳ್ಳಿಯ ಪರಮೇಶ್ವರಪ್ಪ ಎಂಬುವವರ ತೋಟದಲ್ಲಿ ಕುರಿ ಮಂದೆ ಬಿಟ್ಟುಕೊಂಡು ಕೆಲಸ ಮಾಡುತ್ತಿದ್ದ.

ರಾಮನವಮಿ ಹಬ್ಬಕ್ಕೆ ಊರಿಗೆ ಹೋಗಿದ್ದ ಸಂದರ್ಭದಲ್ಲಿ ಕುಮಾರ್, ಮದುವೆ ಮಾಡಿಸುವಂತೆ ಪೋಷಕರ ಬಳಿ ಪಟ್ಟು ಹಿಡಿದಿದ್ದ. ಆದರೆ, ಪೋಷಕರು ಮೊದಲು ಇಬ್ಬರು ಅಣ್ಣಂದಿರ ಮದುವೆಯಾಗಲಿ, ನಂತರ ನಿನಗೆ ಮದುವೆ ಮಾಡುತ್ತೇವೆ ಎಂದು ತಿಳಿಸಿದ್ದರು. ಅಲ್ಲಿಯವರೆಗೆ ಕುರಿ ಮೇಯಿಸಿಕೊಂಡು ಇರುವಂತೆ ಸೂಚಿಸಿ ಮಗನನ್ನು ವಾಪಸ್ ಕಳುಹಿಸಿದ್ದರು.

ಅಲ್ಲಿಯವರೆಗೆ ತನಗೆ ಮದುವೆ ವಯಸ್ಸು ಮೀರುತ್ತದೆ. ತನಗೆ ಮದುವೆಯಾಗಲ್ಲ ಎಂಬ ಚಿಂತೆಯಲ್ಲಿದ್ದ ಕುಮಾರ್, ಮಾನಸಿಕವಾಗಿ ನೊಂದು ತೋಟದ ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Home add -Advt

ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

Related Articles

Back to top button