ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ಆತ್ಮಹತ್ಯೆಗೆ ಶರಣಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇಲ್ಲೋರ್ವ ಯುವಕ ತಾನು ದಪ್ಪಗಿದ್ದೇನೆ ಅದಕ್ಕೆ ಮದುವೆಯಾಗಲು ಹುಡುಗಿ ಸಿಗುತ್ತಿಲ್ಲವೆಂದು ಆತ್ಮಹತ್ಯೆ ಮಡಿಕೊಂಡಿದ್ದಾನೆ.
ಬೆಂಗಳೂರಿನ ಉತ್ತರ ತಾಲೂಕಿನ ನಾರಾಯಣಪ್ಪನಪಾಳ್ಯದಲ್ಲಿ ಈ ಘಟನೆ ನಡೆದಿದೆ. ಆಟೋ ಚಾಲಕ ವೆಂಕಟೇಶ್ (29)ಆತ್ಮಹತ್ಯೆಗೆ ಶರಣಾದವನು. ವೆಂಕಟೇಶ್ 15 ಹುಡುಗಿಯರನ್ನು ನೋಡಿದ್ದನಂತೆ ಆದರೆ ಹುಡುಗಿಯರ ಪೋಷಕರು, ಹುಡುಗ ದಪ್ಪಗಿರುವ ಕಾರಣಕ್ಕೆ ನಿರಾಕರಿಸಿದ್ದಾರೆ ಎನ್ನಲಾಗಿದೆ. ಮದುವೆಗೆ ಹುಡುಗಿ ಸಿಗಲ್ಲ ಎಂದು ಮನನೊಂದು ನೇಣಿಗೆ ಕೊರಳೊಡ್ಡಿದ್ದಾನೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ