Kannada NewsKarnataka NewsNationalPolitics

*ವಿಜಯೇಂದ್ರ ಹಾಗೂ ಬಿಎಸ್ ವೈ ಭೇಟಿಯಾದ ಶ್ರೀರಾಮುಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ರಾಜ್ಯ ಉಸ್ತುವಾರಿ ರಾಧಾಮೋಹನ್ ಸಿಂಗ್ ಅಗರವಾಲ್ ಅವರ ಮೇಲೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಶ್ರೀರಾಮುಲು ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಈ ಮೂಲಕ ಶ್ರೀ ರಾಮುಲು ಅವರ ಮುನಿಸು ಕಡಿಮೆ ಆಗಿದೆ ಎನ್ನಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಅಷ್ಟೆ ಅಲ್ಲದೆ ತಮ್ಮ ಆಪ್ತ ಜನಾರ್ದನ ರೆಡ್ಡಿ ವಿರುದ್ಧವೂ ಶ್ರೀರಾಮುಲು ಅಸಮಾಧಾನಗೊಂಡಿದ್ದರು. ಆದ್ರೆ ಈಗ ಆ ಮುನಿಸೆಲ್ಲ ಶಮನವಾದ ಹಾಗೆ ಕಾಣುತ್ತಿದೆ. ಇಂದು ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ಸುದ್ದಿಗೊಷ್ಠಿ ನಡೆದ ಸಂದರ್ಭದಲ್ಲಿ ಅವರ ಪಕ್ಕದಲ್ಲೇ ಕುಳಿತು ಸುದ್ದಿಗೊಷ್ಠಿಯಲ್ಲಿ ಭಾಗಿಯಾಗಿದ್ರು. ಅಲ್ಲದೇ ಇಂದು ವಿಜಯೇಂದ್ರ ಜೊತೆಯೇ ತೆರಳಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

Home add -Advt

ವಿಜಯೇಂದ್ರ ನೇತೃತ್ವದಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ನಾನು ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಪಕ್ಷ ನನ್ನ ತಾಯಿ ಇದ್ದ ಹಾಗೆ. ರೆಡ್ಡಿ ಜೊತೆ ವೈಮನಸ್ಸು ಅದು ವೈಯಕ್ತಿಕ .ದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ನಾವೆಲ್ಲ ಹೋರಾಟ ಮಾಡಬೇಕಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.

Related Articles

Back to top button