Kannada NewsKarnataka NewsLatest

*ಚಲಿಸುತ್ತಿದ್ದ ರೈಲಿನಿಂದ ಹಾರಿ ಆತ್ಮಹತ್ಯೆಗೆ ಶರಣಾದ ಯುವಕ*

ಪ್ರಗತಿವಾಹಿನಿ ಸುದ್ದಿ: ಯುವಕನೊಬ್ಬ ಚಲಿಸುತ್ತಿದ್ದ ರೈಲಿನಿಂದ ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

Home add -Advt

ಸುಮಾರು ೩೫ ವರ್ಷದ ಯುವಕ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುಕನ ಗುರುತು ಪತ್ತೆಯಾಗಿಲ್ಲ. ಯುವಕನ ದುಡುಕಿನ ನಿರ್ಧಾರಕ್ಕೂ ಕಾರಣ ತಿಳಿದುಬಂದಿಲ್ಲ.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ರೈಲಿನಲ್ಲಿ ಬಂದಿದ್ದ ಯುವಕ ಚಲಿಸುತ್ತಿದ್ದ ರೈಲಿನಿಂದ ತುಂಗಾ ನದಿಗೆ ಹಾರಿದ್ದಾನೆ. ಇದನ್ನು ಗಮನಿಸಿದ ಪ್ರಯಾಣಿಕರೊಬ್ಬರು ರೈಲ್ವೆ ಪೊಲೀಸರುಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಯುವಕನ ಶವವನ್ನು ನದಿಯಿಂದ ಹೊರತೆಗೆದಿದ್ದಾರೆ. ನದಿಯಲ್ಲಿ ನೀರಿಲ್ಲದೇ ಬತ್ತಿ ಹೋಗಿದ್ದರಿಂದ ರೈಲಿನಿಂದ ಹಾರಿದ ರಭಸಕ್ಕೆ ಯುವಕನ ತಲೆಗೆ ಬಲವಾದ ಪೆಟ್ಟಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

Related Articles

Back to top button